Saturday, July 25, 2026
Saturday, July 25, 2026

ಮರಾಠ ಅಭಿವೃದ್ದಿ ನಿಗಮದಿಂದ ಆಹಾರ ವಾಹಿನಿ ಯೋಜನೆ ಸೌಲಭ್ಯದ ಪ್ರಕಟಣೆ

Date:

ಶಿವಮೊಗ್ಗ ಜಿಲ್ಲಾ ಮರಾಠ ಸಮುದಾಯದ ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ಮರಾಠ ಜನಾಂಗದಲ್ಲಿ ಪ್ರವರ್ಗ 3-ಬಿ ಅಡಿಯಲ್ಲಿ 2(ಎ) ರಿಂದ 2 (ಎಫ್) ವರೆಗೆ ಬರುವ (ಎ) ಮರಾಠ, ಮರಾಠ (ಬಿ) ಅರೆಕ್ಷತ್ರಿಯ, ಅರೆ ಮರಾಠ, ರ‍್ಯ ಮರಾಠ (ಸಿ), ಆರ್ಯ, ಅರ್ಯರು (ಡಿ), ಕೊಂಕಣ ಮರಾಠ (ಇ), ಕ್ಷತ್ರಿಯ ಮರಾಠ/ಕ್ಷತ್ರಿಯ ಮರಾಠ (ಎಫ್), ಕುಳವಾಡಿ ಜಾತಿಗಳಿಗೆ ಅನ್ವಯವಾಗುತ್ತದೆ.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಕುಟುಂಬ ವಾರ್ಷಿಕ ವರಮಾನ 3 ಲಕ್ಷ ಒಳಗಿರಬೇಕು ಮತ್ತು ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿರಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ.
ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಮಾ. 05 ರೊಳಗಾಗಿ ಸಲ್ಲಿಸುವಂತೆ ಕ. ಮ. ಸ. ಅ. ನಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://kmcdc.karnataka.gov.in/kn/ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ತೆ, ಕೆ,ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...