Thursday, September 10, 2026
Thursday, September 10, 2026

S.N. Channabasappa ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿಗೆ ಅನುದಾನ ನೀಡಿ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಶ್ರೀ ಕೆ. ವೆಂಕಟೇಶ್ ಅವರನ್ನು ಭೇಟಿಯಾಗಿ, ಪಶುಸಂಗೋಪನಾ ಇಲಾಖೆ ಹಾಗೂ ವೈದ್ಯಕೀಯ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಮನವಿ ಸಲ್ಲಿಸಿದರು.

ವಿಧಾನಸೌಧದಲ್ಲಿ ನಡೆದ ಸಮಿತಿ ಸಭೆಯ ಬಳಿಕ ಸಚಿವರನ್ನು ಭೇಟಿಯಾದ ಶಾಸಕರು, ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿರುವ ‘ಜಾನುವಾರುಗಳ ನಿಗೂಢ ಕಾಯಿಲೆಗಳ ಸಂಶೋಧನಾ ಕೇಂದ್ರ’ದ ಬಲವರ್ಧನೆಗಾಗಿ 10 ಕೋಟಿ ರೂಪಾಯಿಗಳ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಹಾಗೂ ಕೇಂದ್ರಕ್ಕೆ ಅಗತ್ಯವಿರುವ 16 ತಾಂತ್ರಿಕ ಸಿಬ್ಬಂದಿಗಳನ್ನು ತಕ್ಷಣವೇ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಇಲಾಖೆಗೆ ಮಂಜೂರಾಗಿರುವ 2 ಎಕರೆ ಜಮೀನಿನಲ್ಲಿ ಆರ್‌ಐಡಿಎಫ್ (RIDF) ಯೋಜನೆಯಡಿ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಹಾಗೂ ಚಿಕಿತ್ಸಾ ಸಂಕೀರ್ಣಕ್ಕೆ ಆಧುನಿಕ ಉಪಕರಣಗಳನ್ನು ಒದಗಿಸುವಂತೆ ಸಚಿವರಿಗೆ ಮನವಿ ಮಾಡಿದರು. ಶಿವಮೊಗ್ಗದ ಈ ಸಂಸ್ಥೆಗಳು ಜಿಲ್ಲೆಯ ರೈತರ ಮತ್ತು ಪಶುಪಾಲಕರ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಇಲ್ಲಿನ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು.

S.N. Channabasappa ಶಾಸಕರ ಪ್ರಸ್ತಾವನೆಗಳನ್ನು ಆಲಿಸಿದ ಸಚಿವರು, ಈ ಕುರಿತು ಶೀಘ್ರವೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...