Saturday, April 4, 2026
Saturday, April 4, 2026

Rotary Club Shimoga ಫೆಬ್ರವರಿ 14. ಶಿವಮೊಗ್ಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ

Date:

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ, ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 14ರಂದು ಶನಿವಾರ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಫೆರೋಕಾಸ್ಟ್ ಸಭಾಂಗಣದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಫೆಬ್ರವರಿ 14ರಂದು ಬೆಳಗ್ಗೆ 10ಕ್ಕೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಶಿಬಿರ ಉದ್ಘಾಟಿಸುವರು. ಜನನಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ರಾಜೇಶ್ ಪಾದೇಕಲ್ ಅಧ್ಯಕ್ಷತೆ ವಹಿಸುವರು. ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಜನನಿ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಮುಖ್ಯಸ್ಥ ಉದಯಶಂಕರ ಭಟ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸಂತೋಷ್ ಕುಮಾರ್ ಬಿ.ಎನ್, ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ವಿಜಯಕುಮಾರ್ ಅತಿಥಿಗಳಾಗಿ ಭಾಗವಹಿಸುವರು.
ಬೆಳಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಉಚಿತ ವೈದ್ಯಕೀಯ ಸಮಾಲೋಚನೆ ಮತ್ತು ಆಹಾರ ಸಲಹೆ, ರಕ್ತದಲ್ಲಿನ ಸಕ್ಕರೆ ಅಂಶ ತಪಾಸಣೆ, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಸಮಾಲೋಚನೆ, ಆಕ್ಯುಪಂಕ್ಚರ್ ಮತ್ತು ಆಕ್ಯುಪ್ರೆಶರ್, ಬೊಜ್ಜು ಮತ್ತು ಬೆನ್ನು ನೋವು ಸಮಸ್ಯೆಗೆ ಚಿಕಿತ್ಸೆ ಮತ್ತಿತರ ಸೌಲಭ್ಯಗಳಿರುತ್ತವೆ.
Rotary Club Shimoga ಬೆನ್ನುನೋವು, ಕೀಲುನೋವು, ಅಧಿಕ ರಕ್ತದ ಒತ್ತಡ, ಬೊಜ್ಜು, ಮಧುಮೇಹ, ಹೈಪರ್‌ಟೆನ್ಷನ್, ಥೈರಾಯ್ಡ್ ತೊಂದರೆ, ಗ್ಯಾಸ್ಟ್ರೈಟೀಸ್, ಮೈಗ್ರೇನ್, ನಿದ್ರಾಹೀನತೆ, ಉದ್ವಿಗ್ನತೆ, ಪಾಶ್ರ‍್ವವಾಯು, ಸ್ಪಾಂಡಿಲೈಟಿಸ್ ಮತ್ತಿತರ ಸಮಸ್ಯೆಗಳಿಂದ ಬಳಲುವವರು ಶಿಬಿರದ ಪ್ರಯೋಜನ ಪಡೆಯಬಹುದು. ವಿವರಗಳಿಗೆ ಮೊಬೈಲ್ ಸಂಖ್ಯೆ 9448105198 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...