Thursday, September 10, 2026
Thursday, September 10, 2026

ಒಕ್ಕಲಿಗ ಅಭಿವೃದ್ಧಿ ನಿಗಮದ ವತಿಯಿಂದ ಆಹಾರವಾಹಿನಿ ಯೋಜನೆ ಸಹಾಯಧನ ಸೌಲಭ್ಯ ಪ್ರಕಟಣೆ.

Date:

ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 3-ಎ ನಲ್ಲಿ ಕ್ರಮ ಸಂಖ್ಯೆ 1 ರ(ಎ) ಯಿಂದ (ಟಿ) ರವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ,ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜಾತಿಗಳಿಗೆ ಅನ್ವಯವಾಗುತ್ತದೆ.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಕುಟುಂಬದ ವಾರ್ಷಿಕ ವರಮಾನ 3.00 ಲಕ್ಷಗಳ ಒಳಗಿರಬೇಕು ಮತ್ತು ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರು ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು. ಸರ್ಕಾರದ ವಿವೇಚನಾ ಕೋಟಾ/ ನಿಗಮದ ಅಧ್ಯಕ್ಷರು / ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರು ಸಹ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.
ಆಸಕ್ತರು ಸೇವಾಸಿಂಧು ಪೋರ್ಟಲ್ ನ ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಆನ್ ಲೈನ್ ಮೂಲಕ ಮಾರ್ಚ್ 6 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದರೆ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://kvcdc.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ,ಶಿವಮೊಗ್ಗ. ದೂ,ಸಂ: 08182-229634 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...