ನಾಡಿನೆಲ್ಲೆಡೆ ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲೂ ಶಿವರಾತ್ರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ.
ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ- ಜಾತ್ರೋತ್ಸವ ನಡೆಯುತ್ತಿದೆ. ಶಿವಮೊಗ್ಗ ವಿನೋಬನಗರದ ಶಿವಾಲಯ ಹಾಗೂ ಹರಕರೆ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿದವು.ಪುರದಾಳು ಬಸವೇಶ್ವರ ದೇವಾಲಯ, ತೀರ್ಥಹಳ್ಳಿ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶಿವರಾತ್ರಿ ಹಿನ್ನೆಲೆ ಗಣ ಹೋಮ, ಪಂಚಾಮೃತ, ಅಭಿಷೇಕ ಸೇರಿದಂತೆ ವಿಶೇಷ ಪೂಜೆ ನಡೆದವು. ಆಡಳಿತ ಮಂಡಳಿಯ ವತಿಯಿಂದ ಭಕ್ತರಿಗೆ ಉಪಹಾರ- ಪ್ರಸಾದ ವ್ಯವಸ್ಥೆ ಮಾಡಲಾಗಿದೆ.
