Wednesday, February 18, 2026
Wednesday, February 18, 2026

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಆಹಾರವಾಹಿನಿ ಸೌಲಭ್ಯ ಯೋಜನೆ: ಸಹಾಯಧನಕ್ಕೆ ಅರ್ಜಿ ಆಹ್ವಾನ

Date:

ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂದು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಅಲೆಮಾರಿ/ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಅಂಬಿಗ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಜಾತಿ ಸಮುದಾಯಗಳನ್ನು ಹೊರತುಪಡಿಸಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮಾತ್ರ ಸೇರಿದವರಾಗಿರಬೇಕು.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು.ಕುಟುಂಬದ ವಾರ್ಷಿಕ ವರಮಾನ ರೂ.3.00 ಲಕ್ಷಗಳ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿರಬೇಕು.

ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.

ಆಸಕ್ತರು ಸೇವಾಸಿಂದು ಪೋರ್ಟೆಲ್ http://sevasindhukarnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://kvldcl.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ,ದೂ. ಸಂ:08182-229634ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

State Legal Services Authority ಡಾ.ಹರೀಶ್ ದೇಲಂತ ಬೆಟ್ಟು, ಈಗ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರೇತರ ಸದಸ್ಯರು

State Legal Services Authority ರಾಜ್ಯ ಕಾನೂನು ಸೇವೆಗಳ ಪಾಧಿಕಾರದ ಅಧಿಕಾರೇತರ...

MESCOM ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ.20 ರಂದು ಜನಸಂಪರ್ಕ ಸಭೆ

MESCOM ಶಿವಮೊಗ್ಗ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ...