Friday, July 24, 2026
Friday, July 24, 2026

ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರಿ ನಗರ ಸಾರಿಗೆ ಬಸ್ ಸೌಕರ್ಯಕ್ಕೆ ಮನವಿ

Date:

ಹಲವು ವರ್ಷಗಳ ಹಿಂದೆ ಇದ್ದಂತೆಯೇ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸುವಂತೆ ಕರುನಾಡು ಸಂರಕ್ಷಣಾ ವೇದಿಕೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಪಿ. ಶಿವಮೂರ್ತಿ, ದಶಕಗಳ ಹಿಂದಿನಿಂದಲೂ ನಗರದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಸಂಚಾರವನ್ನು ಖಾಸಗಿ ಬಸ್’ನವರ ಒತ್ತಡಕ್ಕೆ ಮಣಿದು ನಿಲ್ಲಿಸಲಾಯಿತು. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳನ್ನು ಮತ್ತೆ ಆರಂಭಿಸಬೇಕು ಎಂದು ಮನವಿ ಮಾಡಿದರು.

ಶಿವಮೊಗ್ಗ ನಗರದ ಕಾಶಿಪುರದಿಂದ ಕರಿಯಣ್ಣ ಬಿಲ್ಡಿಂಗ್, ಪೊಲೀಸ್ ಚೌಕಿ, ಲಕ್ಷ್ಮೀ ಟಾಕೀಸ್ ಮುಖಾಂತರ, ಉಷಾ ನರ್ಸಿಂಗ್ ಹೋಂ, ಸವಳಂಗ ರಸ್ತೆ ಮುಖಾಂತರ ಕೋರ್ಟ್ ಸರ್ಕಲ್, ನೆಹರೂ ರಸ್ತೆಯಿಂದ ಅರ್ಮಿ ಅಹಮದ್ ಸರ್ಕಲ್ ಮುಖಾಂತರ ಮುಖ್ಯ ಬಸ್ ನಿಲ್ದಾಣ ಹಾಗೂ ಬಸ್ಟಾಂಡ್’ನಿಂದ ಅಣ್ಣಾನಗರ, ಟಿಪ್ಪುನಗರ, ಗೋಪಾಳವರೆಗೂ ಸುಮಾರು ವರ್ಷಗಳಿಂದಲೂ ನಗರ ಸಾರಿಗೆ ಬಸ್’ಗಳು ಸಂಚರಿಸುತ್ತಿದ್ದವು.

ಆದರೆ, ಮಧ್ಯಂತರದಲ್ಲಿ ಖಾಸಗಿ ಬಸ್’ನವರ ಒತ್ತಡದ ಮೇರೆಗೆ ನಿಲ್ಲಿಸಿಲಾಗಿದೆ ಎಂದು ಆರೋಪಿಸಿದರು.
ಸರ್ಕಾರಿ ನಗರ ಸಾರಿಗೆ ಬಸ್’ಗಳು ಸಾರ್ವಜನಿಕರಿಗೆ ವಯೋವೃದ್ಧರಿಗೆ, ಕೂಲಿ ಕಾರ್ಮಿಕರಿಗೆ, ಶಾಲಾ ಮಕ್ಕಳಿಗೆ ಮತ್ತು ದಿನನಿತ್ಯ ಕೆಲಸಕ್ಕೆ ಬರುವ ಮಹಿಳೆಯರಿಗೆ ಮತ್ತು ಸಾರ್ವಜನಿಕರಿಗೆ ಅನಾನುಕೂಲವಾಗಿತ್ತು.

ಸದರಿ ಬಸ್ಸನ್ನು ಮತ್ತು ಶಿವಮೊಗ್ಗ ನಗರಕ್ಕೆ ಬರುವ ರೈಲುಗಳ ವೇಳಾಪಟ್ಟಿಯಂತೆ ಪ್ರತಿಯೊಂದು ರೈಲಿಗೂ ಒಂದೊಂದು ಬಸ್ಸನ್ನು ಓಡಿಸಬೇಕು ಎಂದು ಮನವಿ ಮಾಡಿದ್ದಾರೆ.

ರೈಲು ನಿಲ್ದಾಣದಿಂದ ಮುಖ್ಯ ಬಸ್ ನಿಲ್ದಾಣದವರೆಗೂ ಹಾಗೂ ಶಿವಮೊಗ್ಗ ನಗರದ ಮುಖ್ಯ ಬಸ್ ನಿಲ್ದಾಣದಿಂದ ಬಿಎಚ್ ರಸ್ತೆಯ ಮುಖಾಂತರ ಹೊಳೆ ಬಸ್ ನಿಲ್ದಾಣ, ಗುರುಪುರ, ಪುರಲೆವರೆಗೂ ಮತ್ತು ರಾಗಿಗುಡ್ಡದಿಂದ ನಗರಕ್ಕೆ ಹಾಗೂ ಬೊಮ್ಮನಕಟ್ಟೆಯಿಂದ ಶಿವಮೊಗ್ಗ ನಗರದ ಒಳಗಡೆ ಈ ಕೂಡಲೇ ಸರ್ಕಾರಿ ಬಸ್ಸುಗಳನ್ನು ವ್ಯವಸ್ಥೆ ಮಾಡಿಕೊಡಬೇಕಾಗಿ ಮನವಿ ಮಾಡಿದ್ದಾರೆ.

ಇನ್ನು, ಸರ್ಕಾರದ ಶಕ್ತಿಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇರುವುದರಿಂದ ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಮರು ಆರಂಭಿಸಿದರೆ ಎಲ್ಲಾ ಮಹಿಳೆಯರಿಗೂ ಅನುಕೂಲವಾಗಲಿದೆ.

ಈ ಹಿನ್ನೆಲೆಯಲ್ಲಿ ಈ ಕೂಡಲೇ ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸುಮಾರು ಆರು ತಿಂಗಳ ಹಿಂದೆ ಕೆಎಸ್’ಆರ್’ಟಿಸಿ ವಿಭಾಗೀಯ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಖಾಸಗಿ ಬಸ್’ನವರ ಒತ್ತಡಕ್ಕೆ ಮಣಿದು ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಆರಂಭಿಸದೇ ಅನ್ಯಾಯ ಮಾಡಲಾಗುತ್ತಿದೆ. ತಕ್ಷಣವೇ ಸಾರ್ವಜನಿಕರ ಅನುಕೂಲಕ್ಕಾಗಿ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಸರ್ಕಾರಿ ನಗರ ಸಾರಿಗೆ ಬಸ್ ಸಂಚಾರ ಆರಂಭಿಸಬೇಕು.

ಒಂದು ವೇಳೆ ಇದನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ವೇದಿಕೆಯ ಪಿ. ಶಿವಣ್ಣ, ಈಶ್ವರ, ಸಿ. ಮೂರ್ತಿ, ಅರುಣ, ನಿರಂಜನ್, ಶ್ರೀನಿವಾಸ್, ದೇವೇಂದ್ರಪ್ಪ, ನಾಗರಾಜ್, ದೇವರಾಜ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರುಗಳು ಮತ್ತು ಪದಾಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...