B.S. Yediyurappa ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಕವಿ ಡಾ. ಜಿ. ಎಸ್. ಶಿವರುದ್ರಪ್ಪ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಆಯೋಜಿಸಲಾದ ಕಾವ್ಯಸೌರಭ ಹಾಗೂ ಜಿ.ಎಸ್.ಎಸ್. ಪುರಸ್ಕಾರ ಸಮಾರಂಭ ಭಾವಪೂರ್ಣವಾಗಿ ನೆರವೇರಿತು.
ಈ ಮಹತ್ವದ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಭಾಗವಹಿಸಿ, ಕವಿಯ ಸಾಹಿತ್ಯಸೇವೆ ಹಾಗೂ ಕನ್ನಡ ಸಾಹಿತ್ಯಕ್ಕೆ ನೀಡಿದ ಅಪಾರ ಕೊಡುಗೆಗಳನ್ನು ಸ್ಮರಿಸಿದರು.
B.S. Yediyurappa ಕಾವ್ಯ, ಸಂಸ್ಕೃತಿ ಮತ್ತು ಸಾಹಿತ್ಯದ ಸೌಂದರ್ಯ ಒಂದೇ ವೇದಿಕೆಯಲ್ಲಿ ಅರಳಿದ ಈ ಕ್ಷಣಗಳು ಎಲ್ಲರ ಮನಗಳಲ್ಲಿ ಸ್ಮರಣೀಯವಾಗಿ ಉಳಿದವು. ಕನ್ನಡದ ಕಾವ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು
