Thursday, July 23, 2026
Thursday, July 23, 2026

Gruhalakshmi Yojana ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ತೀರಿಕೊಂಡಿದ್ದರೆ ಆ ಮನೆಯ ಅರ್ಹ ಯಜಮಾನಿಯು ಹೊಸದಾಗಿ ಅರ್ಜಿ ಸಲ್ಲಿಸಬೇಕು-ಹೆಚ್.ಎಂ.ಮಧು

Date:

Gruhalakshmi Yojana ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಹೆಸರಿಗೆ ಹಣ ವರ್ಗಾವಣೆಯಾಗುತ್ತಿದ್ದು, ಮನೆಯ ಮುಂದಿನ ಯಜಮಾನಿಯರು ಈ ಬಗ್ಗೆ ತಿಳಿಸಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಮಧು ಹೆಚ್ ಎಂ ತಿಳಿಸಿದರು.
ಶಿವಮೊಗ್ಗ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮರಣ ಹೊಂದಿರುವ ಫಲಾನುಭವಿಗಳ ಖಾತೆಯ ಕುರಿತು ಮಾಹಿತಿ ನೀಡಿ, ಮನೆಯ ಮುಂದಿನ ಯಜಮಾನಿಯರು ಸೌಲಭ್ಯ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಫಲಾನುಭವಿಯ ವ್ಯಕ್ತಿಯ ಜೀವಂತ ಪ್ರಮಾಣ ಪತ್ರ ಸಲ್ಲಿಸುವ ಬಗ್ಗೆ ಯಾವುದೇ ರೀತಿಯ ಆತಂಕ ಬೇಡ. ಸರ್ಕಾರದ ಆದೇಶ/ಸುತ್ತೋಲೆ ಬಂದ ನಂತರ ಕ್ರಮ ವಹಿಸಬಹುದು ಎಂದರು.
ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ ಜನವರಿ ಮಾಹೆವರೆಗೆ 107841 ಮಹಿಳೆಯರು ನೋಂದಣಿಯಾಗಿದ್ದು, 2044 ಫಲಾನುಭವಿಗಳು ಐಟಿ/ಜಿಎಸ್‌ಟಿ ಎಂದು ಪರಿಣಗಣಿಸಲಾಗಿದೆ. ಈ ಬಗ್ಗೆ ಪರಿಶೀಲಿಸಲು 304 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಹಾಗೂ 42 ಫಲಾನುಭವಿಗಳಿಗೆ ಎನ್‌ಪಿಸಿಐ ಬಾಕಿ ಇದ್ದು ಪರಿಶೀಲಿಸಲಾಗುತ್ತಿದೆ. ಹಾಗೂ ನವೆಂಬರ್ ಮಾಹೆವರೆಗೆ ಹಣವನ್ನು ಜಮಾ ಮಾಡಲಾಗಿದೆ.
ತಾಲ್ಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ ಫೆಬ್ರವರಿವರೆಗೆ 54147 ಬಿಪಿಎಲ್ ಪಡಿತರ ಚೀಟಿದಾರರು ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. 5 ವರ್ಷದಿಂದ ಇಕೆವೈಸಿ ಮಾಡಿಸದೇ ಇರುವ ಪಡಿತರದಾರರು ಇಕೆವೈಸಿ ಮಾಡಿಸಿ ಪಡಿತರ ಪಡೆಯಬೇಕು. ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಯಾಗಿರುವ ಪಡಿತರದಾರರು ನಿಗದಿತ ದಾಖಲೆಗಳಾದ 2 ರಿಂದ 3 ವರ್ಷಗಳ ಐಟಿ ರಿಟರ್ನ್ಸ್ ದಾಖಲೆ, ಪಡಿತರ ಚೀಟಿ ಜೆರಾಕ್ಸ್, ಆದಾಯ ಪ್ರಮಾಣ ಪತ್ರಗಳನ್ನು ನೀಡಿ ಮರು ಅರ್ಜಿ ಸಲ್ಲಿಸಬಹುದಾಗಿದ್ದು, ಇದನ್ನು 1 ರಿಂದ 2 ವಾರದಲ್ಲಿ ಪರಿಶೀಲಿಸಲಾಗುವುದು ಎಂದ ಅವರು ಇತ್ತೀಚಿಗೆ 15 ರಿಂದ 20 ಎಪಿಎಲ್ ಕಾರ್ಡ್ಗಳನ್ನು ಬಿಪಿಎಲ್ ಗೆ ಪರಿವರ್ತಿಸಲಾಗಿದೆ ಎಂದರು.
Gruhalakshmi Yojana ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ 11499 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಡಿಸೆಂಬರ್ ಮಾಹೆವರೆಗೆ ರೂ.1,02,46,500 ಹಣ ನೀಡಲಾಗಿದೆ. ಗೃಹಜ್ಯೋತಿ ಯಶಸ್ವಿಯಾಗಿ ಜಾರಿಯಾಗಿದ್ದು, 177290 ಫಲಾನುಭವಿಗಳಿಗೆ ರೂ.1080678819 ಸಬ್ಸಿಡಿ ನೀಡಲಾಗಿದೆ. ಶಕ್ತಿ ಯೋಜನೆಯಡಿ ಈವರೆಗೆ ತಾಲ್ಲೂಕಿನಲ್ಲಿ 25437543 ಬಾರಿ ಮಹಿಳೆಯರು ಪ್ರಯಾಣಿಸಿದ್ದು ಶೇ.63.3 ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿರುತ್ತಾರೆ. ಶೇ.38.2 ಆದಾಯ ಮಹಿಳಾ ಪ್ರಯಾಣಿಕರಿಂದ ಲಭಿಸಿರುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರು, ತಾಲ್ಲೂಕು ಇಓ ಪರಮೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...