Thursday, April 30, 2026
Thursday, April 30, 2026

DVS College of Arts, Science and Commerce ಕಾನೂನಿನಲ್ಲಿ ಮಹಿಳೆಯರ ರಕ್ಷಣೆಗೆ ಆದ್ಯತೆ :ಎಂ.ಎಸ್.ಸಂತೋಷ್

Date:

DVS College of Arts, Science and Commerce ಮಹಿಳೆಯರ ರಕ್ಷಣೆಗೆ ಕಾನೂನಿನಲ್ಲಿ ಹೆಚ್ಚಿನ ಕಾಯ್ದೆಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಹೇಳಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಅಖಿಲ ಭಾರತ ಅಂಚೆ ಅಧಿಕಾರಿಗಳ ಸಂಘದ ಸಿ ಗ್ರೂಪ್ ನೌಕರರು ಮತ್ತು ವಿವಿಧ ಸಂಘಗಳ ವತಿಯಿಂದ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರು ತಮಗೆ ಆದಂತಹ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಬಹುದಾಗಿದೆ. ಅತ್ಯಂತ ಸರಳವಾಗಿ ಇರುವ ಕಾನೂನು ವಿಚಾರಗಳನ್ನು ಜನಸಾಮಾನ್ಯರು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಮಹಿಳಾ ನೌಕರರು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಏನಾದರೂ ಲೈಂಗಿಕ ಕಿರುಕುಳ ಕಂಡು ಬಂದರೆ ಹೇಗೆ ದೂರು ನೀಡಬೇಕು ಮತ್ತು ದೂರು ನೀಡುವಾಗ ಯಾವ ಸಂಗತಿಗಳನ್ನು ಪರಿಗಣಿಸಬೇಕು ಎಂಬುದರ ಬಗ್ಗೆ ಮಾಹಿತಿ ಹೊಂದಿರಬೇಕು. ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಅಲ್ಲಿನ ಮುಖ್ಯಸ್ಥರು ಅಥವಾ ಸಹೋದ್ಯೋಗಿಗಳು ಏನಾದರೂ ಲೈಂಗಿಕ ಕಿರುಕುಳ ನೀಡಿದರೆ ಕಿರುಕುಳಕ್ಕೆ ಒಳಪಟ್ಟ ಮಹಿಳೆಯು ಕಡ್ಡಾಯವಾಗಿ ಬರವಣಿಗೆಯಲ್ಲಿ ದೂರು ನೀಡಬೇಕಾಗುತ್ತದೆ ಎಂದು ಹೇಳಿದರು.
ಆಂತರಿಕ ದೂರು ಸಮಿತಿಗೆ ವಿಚಾರಣೆ ನಡೆಸುವ ಅಧಿಕಾರವಿದೆ. ಮುಂದಿನ ಕ್ರಮ ಕೈಗೊಳ್ಳಬಹುದಾಗಿರುತ್ತದೆ. ಸಿವಿಲ್ ನ್ಯಾಯಾಲಯದ ಎಲ್ಲಾ ಅಧಿಕಾರವು ಈ ಆಂತರಿಕ ದೂರು ಸಮಿತಿಗೆ ಇರುವುದರಿಂದ ಸಮಸ್ಯೆಗೆ ಪರಿಹಾರವನ್ನು ನೀಡಬಹುದಾಗಿದೆ ಎಂದು ತಿಳಿಸಿದರು.
DVS College of Arts, Science and Commerce ಕಾರ್ಯಗಾರದಲ್ಲಿ ಭಾರತ್ ನ್ಯಾಯ ಸಮಿತಿ ಮತ್ತು ಪೋಕ್ಸೋ ಕಾಯ್ದೆಯ ಸಂಪೂರ್ಣ ವಿವರಗಳನ್ನು ತಿಳಿಸಿದರು. ಕರ್ತವ್ಯದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನಿಯಂತ್ರಣ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್ ಮಾತನಾಡಿ, ಮಹಿಳೆಯರು ಸಮಾಜದ ಎಲ್ಲ ರಂಗಗಳಲ್ಲಿ ಸಾಧನೆಗಳನ್ನು ಮಾಡುತ್ತಿದ್ದಾರೆ. ಬಹಳ ಮುಖ್ಯವಾಗಿ ಅಂಚೆ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳಾ ನೌಕರರಿದ್ದಾರೆ ಎಂದರು.
ಅಖಿಲ ಭಾರತ ಅಂಚೆ ಅಧಿಕಾರಿಗಳ ಸಂಘದ ರೂಪಾ, ಕ್ರಿಸ್ಟಿನಾ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...