Thursday, June 18, 2026
Thursday, June 18, 2026

International Women’s Day ಸೈಲ್-ವಿಐಎಸ್‌ಎಲ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Date:

International Women’s Day ಸೈಲ್-ವಿಐಎಸ್‌ಎಲ್ ನ ಫ್ಯಾಕ್ಟರಿ ಮೀಟಿಂಗ್‌ಹಾಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ‘ಕೊಡುವುದರಿಂದ ಪ್ರಗತಿ’ ಎಂಬ ಧ್ಯೇಯದೊಂದಿಗೆ ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಅನೂಪ್ ಕುಮಾರ್, ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವ ಸಂಪನ್ಮೂಲ), ಶ್ರೀ ಟಿ. ರವಿಚಂದ್ರನ್, ಮಹಾಪ್ರಬಂಧಕರು (ಸ್ಥಾವರ), ಡಾ. ಹೆಚ್. ಶೋಭ, ಉಪ ಮುಖ್ಯ ವೈಧ್ಯಾಧಿಕಾರಿ, ಶ್ರೀ ಜಿ. ಅಮೃತ್ ಕುಮಾರ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ಶ್ರೀ ಅಜಯ್ ಸೋಂಕುವಾರ್, ಅಧ್ಯಕ್ಷರು, ವಿಐಎಸ್‌ಎಲ್ ಅಧಿಕಾರಿಗಳ ಸಂಘ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಅನೂಪ್ ಕುಮಾರ್, ತಮ್ಮ ಭಾಷಣದಲ್ಲಿ ವಿಐಎಸ್‌ಎಲ್‌ನ ಮಹಿಳಾ ಸಮುದಾಯದ ಪ್ರಮುಖ ಸಾಧನೆಗಳನ್ನು ಪ್ರಸ್ತಾಪಿಸುತ್ತಾ ಸಮಾಜಕ್ಕೆ ಮತ್ತು ಕಾರ್ಖಾನೆಗೆ ಅವರ ಕೊಡುಗೆಯನ್ನು ಶ್ಲಾಘಿಸಿದರು. ಹಾಗೆಯೇ, ಸೈಲ್-ವಿಐಎಸ್‌ಎಲ್ ನಲ್ಲಿ ಮಹಿಳೆಯರಿಗೆ ಪ್ರೋತ್ಸಾಹ ಮತ್ತು ಸಹಕಾರವನ್ನು ನೀಡುವ ಮೂಲಕ ಅವರು ತಮ್ಮ ಸಮಾಥ್ಯವನ್ನು ಪ್ರದರ್ಶಿಸುವಲ್ಲಿ ಸಹಕಾರಿಯಾಗಿದೆ ಎಂದರು.

ಡಾ. ಶೋಭ, ಡಾ. ಸುಶ್ಮಾ, ಶ್ರೀಮತಿಯವರಾದ ಅಪರ್ಣ, ನಾಗರತ್ನ, ಚಂದ್ರಾವತಿ, ಶೈಲಶ್ರೀ, ಅಮಿತಾ, ಮಂಜುಶ್ರೀ, ರಮ್ಯ, ರಕ್ಷಿತ, ತ್ರಿವೇಣಿ, ಹೇಮ, ಸರಸ್ವತಿ, ಮತ್ತು ಯೋಗೇಶ್ವರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಮಹಿಳಾ ಉದ್ಯೋಗಿಗಳಿಗೆ ಮತ್ತು ಮಹಿಳಾ ಗುತ್ತಿಗೆ ಕಾರ್ಮಿಕರಿಗೆ ವಿನೋದದ ಆಟಗಳನ್ನು ಆಯೋಜಿಸಲಾಗಿತ್ತು. ಪ್ರಶಸ್ತಿ ವಿಜೇತರಿಗೆ ಗಣ್ಯರಿಂದ ಬಹುಮಾನ ವಿತರಿಸಲಾಯಿತು.

International Women’s Day ಸೈಲ್-ವಿಐಎಸ್‌ಎಲ್ ರಾಂಚಿಯವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ವೀಡಿಯೋ ಸಂವಾದದಲ್ಲಿ ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಅನೂಪ್ ಕುಮಾರ್, ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವ ಸಂಪನ್ಮೂಲ), ಶ್ರೀ ಟಿ. ರವಿಚಂದ್ರನ್, ಮಹಾಪ್ರಬಂಧಕರು (ಸ್ಥಾವರ) ಮತ್ತು ವಿಐಎಸ್‌ಎಲ್‌ನ ಮಹಿಳಾ ಕಾರ್ಮಿಕರು ಭಾಗವಹಿಸಿ ಸೈಲ್ ಅಧ್ಯಕ್ಷರು ಮತ್ತು ಸೈಲ್ ಬೊರ್ಡ್ ಸದಸ್ಯರೊಂದಿಗೆ ಸಂವಾದದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...