CM Siddaramaiah ಶಿವಮೊಗ್ಗದ ಶಾಸಕರಾದ ಎಸ್.ಎನ್. ಚೆನ್ನಬಸಪ್ಪನವರ ಕಚೇರಿಗೆ ಕ್ಯಾನ್ಸರ್ನಂತಹ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಅನೇಕ ನಿವಾಸಿಗಳು ಶಸ್ತ್ರಚಿಕಿತ್ಸೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ನೆರವು ಕೋರಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ವಿಧಾನಸೌಧದಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪನವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
CM Siddaramaiah ಈ ಸಂದರ್ಭದಲ್ಲಿ ಅವರ ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಭರಿಸಲು ‘ಮುಖ್ಯಮಂತ್ರಿ ಪರಿಹಾರ ನಿಧಿ’ಯ (CMRF) ಅಡಿಯಲ್ಲಿ ತುರ್ತಾಗಿ ಆರ್ಥಿಕ ನೆರವು ಮಂಜೂರು ಮಾಡುವಂತೆ ಕೋರಿ ಅವರಿಗೆ ಅಧಿಕೃತ ಮನವಿಯನ್ನು ಸಲ್ಲಿಸಲಾಯಿತು.
