Chamber of Commerce Shivamogga ಕನ್ನಡ ದಿನಪತ್ರಿಕೆ ವಿಜಯವಾಣಿ ನೀಡುವ ವಿಜಯರತ್ನ ಇಂಟರ್ ನ್ಯಾಷನಲ್ 2026 ಪ್ರಶಸ್ತಿ ಪುರಸ್ಕೃತ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಪ್ರದೀಪ್ ವಿ.ಎಲಿ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಉದ್ಯಮದಲ್ಲಿ ಶ್ರಮ ಹಾಗೂ ಪ್ರಾಮಾಣಿಕತೆ ಇದ್ದರೆ ಅಂತರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಸಾಧ್ಯ ಎಂದು ತಿಳಿಸಿದರು.
ಉದ್ಯಮ ಕ್ಷೇತ್ರದಲ್ಲಿ ಸತತ ಪರಿಶ್ರಮ, ನಿಷ್ಠೆ ಮತ್ತು ಸಮಾಜಪರ ಬದ್ಧತೆ ಮೂಲಕ ಗಮನಾರ್ಹ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಪ್ರದೀಪ್ ವಿ.ಎಲಿ ಅವರನ್ನು “ವಿಜಯರತ್ನ” ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವ್ಯವಹಾರದಲ್ಲಿ ಗುಣಮಟ್ಟ, ನಂಬಿಕೆ ಮತ್ತು ಸೇವಾ ಮನೋಭಾವವನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಮುನ್ನಡೆಯುತ್ತಿದ್ದಾರೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಯುವ ಉದ್ಯಮಿಗಳ ಸಂಖ್ಯೆ ಹೆಚ್ಚಾಗಬೇಕು. ಸರ್ಕಾರದ ವತಿಯಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಶಿವಮೊಗ್ಗ ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕೆ ಸಂಘವು ಯುವ ಉದ್ಯಮಿಗಳಿಗೆ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಲಿದೆ ಎಂದು ತಿಳಿಸಿದರು.
Chamber of Commerce Shivamogga ಸನ್ಮಾನಿತ ಪ್ರದೀಪ್ ವಿ.ಎಲಿ ಮಾತನಾಡಿ, ಈ ಗೌರವ ನನ್ನ ಕುಟುಂಬ, ಸಹೋದ್ಯೋಗಿಗಳ ಆಶೀರ್ವಾದದ ಫಲ. ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ ಕೂಡ ಇದೆ. ಮುಂದೆಯೂ ಸಮಾಜಮುಖಿ ಕಾರ್ಯಗಳಲ್ಲಿ ಇನ್ನಷ್ಟು ತೊಡಗಿಸಿಕೊಳ್ಳುತ್ತೇನೆ ಎಂದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ನಿರ್ದೇಶಕರಾದ ಬಿ.ಸುರೇಶ್ ಕುಮಾರ್, ಗಣೇಶ್ ಎಂ.ಅಂಗಡಿ , ಜಿ.ವಿ.ಕಿರಣ್ ಕುಮಾರ್ , ರವಿಪ್ರಕಾಶ್ ಜೆನ್ನಿ, ಸಿ ಎ ಶರತ್, ಎಸ್ ಎಸ್ ಉದಯ್ ಕುಮಾರ್, ವಿನೋದ್ ಕುಮಾರ್ ಜೈನ್, ಎಸ್ ಪಿ ಶಂಕರ್, ಮಂಜೇಗೌಡ, ಹಾಲಸ್ವಾಮಿ, ಡಾ. ಲಕ್ಷ್ಮೀದೇವಿ ಗೋಪಿನಾಥ್, ಸಹನಾ ಸುಭಾಷ್ ಹಾಗೂ ಮಾಜಿ ಅಧ್ಯಕ್ಷ ಡಿ ಎಂ ಶಂಕರಪ್ಪ ಇತರರಿದ್ದರು.
Chamber of Commerce Shivamogga ವಿಜಯರತ್ನ ಪುರಸ್ಕೃತ ಪ್ರದೀಪ್ ವಿ.ಎಲಿಗೆ ಸನ್ಮಾನ
Date:
