Wednesday, September 16, 2026
Wednesday, September 16, 2026

Department of Kannada and Culture ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ

Date:

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುವರ್ಣ ಸಂಸ್ಕೃತಿ ಭವನ, ರಂಗಾಯಣ, ಶಿವಮೊಗ್ಗ ಇಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಪಿ ಲಂಕೇಶ್ ಬಯಲು ಮಂದಿರ’ ಉದ್ಘಾಟನಾ ಸಮಾರಂಭವನ್ನು ಮಾ.14 ರ ಸಂಜೆ 4.30 ಕ್ಕೆ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಇವರ ಘನ ಉಪಸ್ಥಿತಿ ಇರಲಿದ್ದು, ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಧಿಕಾರಿಗಳು, ರಂಗ ಸಮಾಜದ ಸದಸ್ಯರು, ರಂಗ ಕಲಾವಿದರು ಪಾಲ್ಗೊಳ್ಳುವರು.
ಉದ್ಘಾಟನಾ ಕಾರ್ಯಕ್ರಮದ ನಂತರ ಗುಡ್ಡಪ್ಪ ಜೋಗಿ ಅವರಿಂದ ತತ್ವಪದ ಗಾಯನ ಹಾಗೂ ರಂಗಾಯಣ ಮೈಸೂರು ಪ್ರಸ್ತುತಿಯ ಹಿರಿಯ ಕಲಾವಿದರ ಅಭಿಯನದ ಡಾ.ಸವಿತಾರಾಣಿ ಪರಿಕಲ್ಪನೆ, ವಿನ್ಯಾಸ ಮತ್ತು ನಿರ್ದೇಶನದ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನವಿದ್ದು ಪ್ರವೇಶ ಉಚಿತವಾಗಿರುತ್ತದೆ ಎಂದು ರಂಗಾಯಣದ ಆಡಳಿತಾಧಿಕಾರಿ ಡಾ.ಶೈಲಜಾ ಎ ಸಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...