2026-27ನೇ ಸಾಲಿಗೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 02/05/2026 ರಿಂದ 28/02/2027 ರವರೆಗೆ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 13 ರವರೆಗೆ ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯ ವೆಬ್‌ಸೈಟ್https://horticulturedir.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳುಬಹುದು ಅಥವಾ ಜಿಲ್ಲೆಯ ತೋಟಗಾರಿಕೆ ಹಿರಿಯ ಸಹಾಯ ನಿರ್ದೇಶಕರು(ರಾಜ್ಯವಲಯ) ಇವರ ಕಚೇರಿಯಿಂದ ಅಥವಾ ಆಯಾ ತಾಲ್ಲೂಕಿನಲ್ಲಿರುವ ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಯು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-222794/ 9686950460 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹತ್ತು ತಿಂಗಳ ತೋಟಗಾರಿಕಾ ತರಬೇತಿಗೆ ಆಸಕ್ತ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
Date:
