Priyank Kharge ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.
◆ ನೀರು ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಫ್ಲಶಿಂಗ್ ಮತ್ತು ಆಳಗೊಳಿಸಿ ನೀರಿನ ಮೂಲಗಳನ್ನು ಹೆಚ್ಚಿಸಬೇಕು.
◆ ಕೊಳವೆಬಾವಿಗಳನ್ನು ಕೊರೆಯುವುದು ಅತ್ಯಗತ್ಯವೆಂದು ಕಂಡು ಬಂದಲ್ಲಿ, ಸಂಬಂಧಪಟ್ಟ ಭೂವಿಜ್ಞಾನಿಗಳ ವರದಿಯನುಸಾರ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕಾಮಗಾರಿಗಳನ್ನು ಕೈಗೊಳ್ಳಬೇಕು.
◆ ಕುಡಿಯುವ ನೀರಿನ ಸಮಸ್ಯೆಯನ್ನು ದೈನಂದಿನ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಲು ಕ್ರಮವಹಿಸಬೇಕು.
◆ ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಮಟ್ಟದಲ್ಲಿ ಪ್ರಾಥಮಿಕ ಹಂತವಾಗಿ ಎಲ್ಲಾ ಕುಡಿಯುವ ನೀರಿನ ಮೂಲಗಳ ಮಾದರಿಗಳನ್ನು, ಪ್ರತಿ ಗ್ರಾಮದಲ್ಲಿ ಕನಿಷ್ಠ 3 ನಳ ನೀರು ಸಂಪರ್ಕಗಳ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೈಗೊಂಡು ಮಾಹಿತಿ ದಾಖಲಿಸಬೇಕು ಎಂದು ಸೂಚಿಸಲಾಗಿದೆ.
◆ ರಾಜ್ಯದಲ್ಲಿ ಈಗಾಗಲೆ 21 ಜಿಲ್ಲೆಗಳ 144 ತಾಲ್ಲೂಕುಗಳಲ್ಲಿನ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುತ್ತದೆ, ಇವುಗಳ ಪೈಕಿ 31 ಗ್ರಾಮಗಳಿಗೆ 96 ಟ್ಯಾಂಕರ್‌ಗಳ ಮುಖಾಂತರ ಹಾಗೂ 152 ಗ್ರಾಮಗಳಿಗೆ 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ.
Priyank Kharge 2026ನೇ ಸಾಲಿನ ಬೇಸಿಗೆಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯಗಳ ಬರ ಪರಿಹಾರ ನಿಧಿ ಹಾಗೂ ಇಲಾಖೆಯ ಟಾಸ್ಕ್‌ಫೋರ್ಸ್ ಅಡಿ ಸಂಯೋಜಿತಗೊಳಿಸಿ ಬಳಸಿಕೊಂಡು ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸಲು ಸೂಚಿಸಲಾಗಿದೆ.
