Wednesday, September 16, 2026
Wednesday, September 16, 2026

ಶಿಕ್ಷಣ ಹಾಗೂ ದಾಸೋಹ ವ್ಯವಸ್ಥೆಯಿರುವ ಮಠಗಳಿಗೆ ಆದ್ಯತೆ ಮೇರೆಗೆ ಗ್ಯಾಸ್ ಸಿಲಿಂಡರ್ ಒದಗಿಸಲು ಮನವಿ

Date:

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ಆಶ್ರಯ, ಶಿಕ್ಷಣ ಹಾಗೂ ದಾಸೋಹದ ವ್ಯವಸ್ಥೆಯನ್ನು ಮಾಡುತ್ತಿರುವ ಮಠಗಳಿಗೆ ಮೊದಲ ಆದ್ಯತೆ ಮೇರೆಗೆ ಅಡುಗೆ ಅನಿಲ ಪೂರೈಕೆ ಮಾಡಬೇಕು ಎಂದು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದ ಗೌಡ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಶತಮಾನಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಜಾತಿ, ಮತಗಳ ಭೇದವಿಲ್ಲದೆ ಜ್ಞಾನವನ್ನು ನೀಡುತ್ತಿರುವ ಮಠಗಳ ಮೇಲೆಯೂ ಕೊಲ್ಲಿ ರಾಷ್ಟçಗಳ ಯದ್ಧದ ಪರಿಣಾಮ ಎದುರಾಗಿದೆ. ಸಮರ್ಪಕವಾಗಿ ಅಡುಗೆ ಅನಿಲ ದೊರೆಯದೇ ದಾಸೋಹಕ್ಕೆ ತೊಂದರೆಯಾಗುತ್ತಿದೆ. ಉತ್ತರ ಕರ್ನಾಟಕದ ಹಲವು ಮಠಗಳು ಸೌದೆಗೆ ಮೊರೆ ಹೋಗಿದ್ದು, ಇತ್ತ ಸೌದೆಯೂ ಅವಶ್ಯಕತೆಗೆ ತಕ್ಕಷ್ಟು ದೊರೆಯುತ್ತಿಲ್ಲ. ಮಠಗಳಿಗೆ ದುಸ್ಥಿತಿ ಎದುರಾಗಿದೆ ಎಂದಿದ್ದಾರೆ.
ಮಠಗಳು ಹಾಗೂ ಕೆಲ ಸಂಸ್ಥೆಗಳು ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರವನ್ನೂ ಕಲಿಸುತ್ತಿವೆ. ತ್ರಿವಿಧ ದಾಸೋಹ ಪದ್ಧತಿಯು ಶಿಕ್ಷಣದ ಸಮಾನತೆಗೆ ನಾಂದಿ ಹಾಡಿದೆ. ಇಂತಹ ಮಠಗಳಲ್ಲಿ ಆಹಾರ ತಯಾರಿಸಲು ಸಮರ್ಪಕವಾಗಿ ಅಡುಗೆ ಅನಿಲ ಪೂರೈಕೆ ಮಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಸರ್ಕಾರಗಳು ಮಾಡುವ ಕೆಲಸವನ್ನು ಯಾವುದೇ ಪ್ರತಿಫಲಾಕ್ಷೆ ಇಲ್ಲದೇ ಮಠಗಳು ಕಾರ್ಯ ನಿರ್ವಹಿಸುತ್ತಿವೆ. ಆದ್ದರಿಂದ ತ್ರಿವಿಧ ದಾಸೋಹದಲ್ಲಿ ತೊಡಗಿದ ಮಠಗಳಿಗೆ ಮೊದಲ ಆದ್ಯತೆ ಮೇರೆಗೆ ಅಡುಗೆ ಅನಿಲ ಪೂರೈಕೆ ಮಾಡಿದರೆ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...