Wednesday, September 16, 2026
Wednesday, September 16, 2026

D.S.Arun ಕುವೆಂಪು ವಿವಿ ಕುಲಸಚಿವರ ವಿರುದ್ಧ ಭ್ರಷ್ಠಾಚಾರ ಆರೋಪ: ಸರ್ಕಾರ ಮದ್ಯೆ ಪ್ರವೇಶಿಸಬೇಕು- ಶಾಸಕ ಡಿ.ಎಸ್.ಅರುಣ್

Date:

ಮಲೆನಾಡು ಭಾಗದ ಹಾಗೂ ಶಿವಮೊಗ್ಗ ಜಿಲ್ಲೆಯ ಹೆಮ್ಮೆಯಾಗಿರುವ ಕುವೆಂಪು ವಿಶ್ವವಿದ್ಯಾಲಯ ಗೌರವ ಮತ್ತು ಘನತೆಗೆ ಧಕ್ಕೆಯಾಗುವಂತಹ ಬೆಳವಣಿಗೆಗಳ ಕುರಿತು ವಿಧಾನ ಪರಿಷತ್‌ನಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರು, ವಿಶ್ವವಿದ್ಯಾಲಯದ ಆಡಳಿತದಲ್ಲಿ ಉಂಟಾಗಿರುವ ಗೊಂದಲಗಳು ಹಾಗೂ ಕುಲಸಚಿವರ ವಿರುದ್ಧ ಕೇಳಿಬರುತ್ತಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್‌ನ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು,ಕುವೆಂಪು ವಿಶ್ವವಿದ್ಯಾಲದ ಕುಲಸಚಿವರ ವಿರುದ್ಧ ವಿವಿಧ ಹಗರಣಗಳು ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ಅತ್ಯಂತ ಚಿಂತಾಜನಕ ವಿಷಯವಾಗಿದೆ ಎಂದು ಹೇಳಿದರು.

ಅಲ್ಲದೆ, ಕುಲಸಚಿವರು ಹಾಗೂ ಕುಲಪತಿಗಳ ನಡುವೆ ಹೊಂದಾಣಿಕೆ ಕೊರತೆಯಿರುವುದು ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ಮತ್ತು ಶೈಕ್ಷಣಿಕ ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುವೆಂಪು ವಿಶ್ವವಿದ್ಯಾಲಯದ ಘನತೆ ಮತ್ತು ವಿಶ್ವಾಸವನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ಯಾವುದೇ ರೀತಿಯ ಗೊಂದಲಗಳು ಮತ್ತು ಆರೋಪಗಳು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ತಕ್ಷಣ ಸ್ಪಷ್ಟ ಕ್ರಮ ಕೈಗೊಳ್ಳಬೇಕು ಎಂದು ಅವರು ದೃಢವಾಗಿ ತಿಳಿಸಿದರು.

D.S.Arun ಈ ವಿಷಯದ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವರು ತಕ್ಷಣ ಗಮನ ಹರಿಸಿ, ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ವಿಶ್ವವಿದ್ಯಾಲಯದ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಶಿಸ್ತನ್ನು ಕಾಪಾಡಿ ಸಂಸ್ಥೆಯ ಗೌರವವನ್ನು ಉಳಿಸಬೇಕೆಂದು ಅವರು ಒತ್ತಾಯಿಸಿದರು.

ಈ ವಿಷಯದ ಕುರಿತು ಉನ್ನತ ಶಿಕ್ಷಣ ಸಚಿವರು ಪ್ರತಿಕ್ರಿಯಿಸಿ, ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ ಎಂದು ತಿಳಿಸಿ,ತಕ್ಷಣ ಅಗತ್ಯ ಕ್ರಮ ಕೈಗೊಂಡು ಸಂಬಂಧಿಸಿದ ಅಧಿಕಾರಿಯನ್ನು ವರ್ಗಾವಣೆ ಮಾಡಲು ನಿರ್ದೇಶನ ನೀಡಿದ್ದೇನೆ ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...