B.Y. Raghavendra ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯದ ಅಭಿವೃದ್ಧಿ ಹಾಗೂ ಹಿತಾಸಕ್ತಿಗಳಿಗೆ ಸಂಬಂಧಿಸಿದ ಪ್ರಮುಖ ಸಭೆಯಲ್ಲಿ
ಶಿವಮೊಗ್ಗ ಸಂಸದರಾದ ಬಿ .ವೈ. ರಾಘವೇಂದ್ರ ಅವರು ಭಾಗವಹಿಸಿದರು.
ನಮ್ಮ ರಾಜ್ಯದ ಮೂಲಸೌಕರ್ಯ ವೃದ್ಧಿ, ಕೈಗಾರಿಕಾ ಪ್ರಗತಿ ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದರು.
ಕರ್ನಾಟಕವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸಲು ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಲು ಬದ್ಧರಾಗಿದ್ದೇವೆ ಎಂದು ಹೇಳಿದರು.
B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ರಾಜ್ಯದ ಸಮಗ್ರ ವಿಕಾಸವೇ ನಮ್ಮ ಮುಖ್ಯ ಗುರಿ ಎಂದು ತಿಳಿಸಿದರು.
