Wednesday, March 18, 2026
Wednesday, March 18, 2026

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Date:

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭವಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅವರು ಆತ್ಮಸ್ಥೈರ್ಯ ತುಂಬಿ ಶುಭ ಹಾರೈಸಿದರು.

ಈ ವರ್ಷ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ವಿಶೇಷವಾಗಿ 16 ದೃಷ್ಟಿಮಾಂದ್ಯ ಮಕ್ಕಳು ಬರಹಗಾರರ ಸೌಲಭ್ಯ ಬಳಸದೆ, ಸ್ವತಃ ಲ್ಯಾಪ್‌ಟಾಪ್ ಬಳಸಿ ಪರೀಕ್ಷೆ ಬರೆಯುತ್ತಿರುವುದು ಅತ್ಯಂತ ಹೆಮ್ಮೆಯ ವಿಚಾರ.

ಸರ್ಕಾರಿ ಶಾಲೆಗಳ 3,59,594 ವಿದ್ಯಾರ್ಥಿಗಳು, ಅನುದಾನಿತ ಶಾಲೆಗಳ 2,11,486 ವಿದ್ಯಾರ್ಥಿಗಳು ಹಾಗೂ ಅನುದಾನರಹಿತ ಶಾಲೆಗಳ 2,94,908 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ವಿದ್ಯಾರ್ಥಿಗಳಿಗೆ ಸಚಿವರ ಕಿವಿಮಾತು:

ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವರು, “ಮಕ್ಕಳು ಯಾವುದೇ ಒತ್ತಡವಿಲ್ಲದೆ, ಭಯಮುಕ್ತರಾಗಿ ಪರೀಕ್ಷೆ ಎದುರಿಸಬೇಕು. ಪೋಷಕರು ಸಹ ಮಕ್ಕಳ ಮೇಲೆ ಒತ್ತಡ ಹೇರಬಾರದು. ಪರೀಕ್ಷಾ ಸಿದ್ಧತೆಗಾಗಿ ಈಗಾಗಲೇ 3 ಪೂರ್ವಸಿದ್ಧತಾ (Preparatory) ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದು ಮಕ್ಕಳಲ್ಲಿನ ಭಯವನ್ನು ಹೋಗಲಾಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳು ಆಮಿಷಗಳಿಗೆ ಒಳಗಾಗಿ ತಪ್ಪು ದಾರಿ ಹಿಡಿದು ಮೊಸಹೋಗಬಾರದು” ಎಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿನಂತಿಸಿದರು.

Madhu Bangarappa ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲ ಕೇಂದ್ರಗಳಲ್ಲೂ ವೆಬ್‌ಕಾಸ್ಟಿಂಗ್ ಮೂಲಕ ನಿಗಾ ವಹಿಸಲಾಗಿದೆ. ಪ್ರತಿದಿನ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಪೋಲೀಸ್ ಸಿಬ್ಬಂದಿಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗುತ್ತಿದೆ. ಆಯಾ ಜಿಲ್ಲಾ ಆಡಳಿತದ ಮೂಲಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. “ಭಯಮುಕ್ತರಾಗಿ ಸಂತಸದಿಂದ ಪರೀಕ್ಷೆ ಬರೆಯಿರಿ, ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ” ಎಂದು ಎಸ್. ಮಧು ಬಂಗಾರಪ್ಪ ಅವರು ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...

Women’s Day ಚಿತ್ರಕಲಾ ಸ್ಪರ್ಧೆ ಮಹಿಳೆಯರ ಸುಪ್ತ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ- ಎನ್.ಹೇಮಂತ್

Women's Day ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ...

H.M. Chandrashekariah ವ್ಯಕ್ತಿಯಲ್ಲಿನ ಧನಾತ್ಮಕ ಬದಲಾವಣೆಯೇ ಯೋಗದ ಪರಿಣಾಮ- ಹೆಚ್.ಎಂ.ಚಂದ್ರಶೇಖರಯ್ಯ

H.M. Chandrashekariah ವ್ಯಕ್ತಿಯ ದೇಹ, ಮನಸ್ಸು, ಬುದ್ಧಿ ಹಾಗೂ ಅಹಂಕಾರಗಳಲ್ಲಿನ ಧನಾತ್ಮಕ...