Friday, July 10, 2026
Friday, July 10, 2026

Breaking News ಮೃಗಾಲಯದಲ್ಲಿ ನೀರಾನೆ ದಾಳಿಗೆ ಡಾ.ಸಮೀಕ್ಷಾ ರೆಡ್ಡಿ‌ ಬಲಿ. ಶಾಸಕ ಚೆನ್ನಿ ಸಂತಾಪ.

Date:

Breaking News ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಕರ್ತವ್ಯನಿರತರಾಗಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ನೀರಾನೆ ದಾಳಿಯಿಂದ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವುಂಟಾಗಿದೆ. ಅಸ್ವಸ್ಥ ಪ್ರಾಣಿಗೆ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಸಂಭವಿಸಿದ ಈ ದುರ್ಘಟನೆ ನಿಜಕ್ಕೂ ಅತ್ಯಂತ ಹೃದಯವಿದ್ರಾವಕವಾಗಿದೆ ಎಂದು ಶಿವಮೊಗ್ಗ ಶಾಸಕ
ರಾದ ಎಸ್.ಎನ್. ಚೆನ್ನಬಸಪ್ಪನವರು ಸಂತಾಪ ಸೂಚಿಸಿದ್ದಾರೆ.

Breaking News ವನ್ಯಜೀವಿಗಳ ಸೇವೆಯಲ್ಲಿ ತೊಡಗಿದ್ದ ಒಬ್ಬ ಪ್ರತಿಭಾವಂತ ಯುವ ವೈದ್ಯೆಯನ್ನು ನಾವು ಕಳೆದುಕೊಂಡಿರುವುದು ಜಿಲ್ಲೆಗೆ ಮತ್ತು ಪಶುವೈದ್ಯಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ರಾಜ್ಯ ಸರ್ಕಾರವು ಮೃತರ ಕುಟುಂಬಕ್ಕೆ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು. ಈ ಘಟನೆಯಲ್ಲಿ ಸುರಕ್ಷತಾ ಲೋಪಗಳಿವೆಯೇ ಎಂಬುದರ ಬಗ್ಗೆ ಸಂಬಂಧಪಟ್ಟ ಇಲಾಖೆಯಿಂದ ಕೂಲಂಕುಷ ತನಿಖೆಯಾಗಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...