N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ ಲಕ್ಷಾಂತರ ರೈತಾಪಿ ಕುಟುಂಬಗಳ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಸಚಿವರಾದ ಚೆಲುವರಾಯಸ್ವಾಮಿಯವರು ತಿಳಿಸಿದ್ದಾರೆ.
ಕಳೆದ ವರ್ಷ ಕೃಷಿ ಇಲಾಖೆಯ ಸುಮಾರು 945 ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಯನ್ನು KPSC ಮೂಲಕ ನಡೆಸಲು ಆದೇಶಿಸಲಾಗಿತ್ತು.
ಆದರೆ, ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಇರಬೇಕು ಮತ್ತು ಶೀಘ್ರವಾಗಿ ನೇಮಕಾತಿ ನಡೆಯಬೇಕು ಎಂಬುದು ರಾಜ್ಯದ ಸಾವಿರಾರು ಅಭ್ಯರ್ಥಿಗಳ ಮನವಿ ಹಾಗೂ ಒತ್ತಾಯವಾಗಿತ್ತು.
ಈ ನ್ಯಾಯಯುತ ಬೇಡಿಕೆಯನ್ನು ಪರಿಗಣಿಸಿ, KPSC ಮೂಲಕ ನೇಮಕಾತಿ ನಡೆಸುವ ಹಳೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಂದು ರದ್ದುಗೊಳಿಸಿದ್ದೇವೆ ಎಂದಿದ್ದಾರೆ.
N. Chaluvaraya Swamy ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇನ್ನು ಮುಂದೆ KEA ಮೂಲಕವೇ ನಡೆಸಲು ಅಧಿಕೃತವಾಗಿ ಆದೇಶ ಹೊರಡಿಸಿದ್ದೇವೆ ಎಂದಿದ್ದಾರೆ.
ಪಾರದರ್ಶಕತೆ ಮತ್ತು ಅರ್ಹತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ಗ್ರಾಮೀಣ ಭಾಗದ, ಕೃಷಿ ಕುಟುಂಬದ ಹಿನ್ನೆಲೆಯುಳ್ಳ ಪ್ರತಿಭಾವಂತ ಯುವಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
