National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಹ ಸಾಮಾನ್ಯ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.
“ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ \ ಕೀಟ ನಿಯಂತ್ರಣ” ಕಾರ್ಯಕ್ರಮದಡಿ ಜೈವಿಕ ಗೊಬ್ಬರವಾದ ಅರ್ಕ ಮೈಕ್ರೋಬಿಯಲ್ ಕನ್ಸಾರ್ಷಿಯಮ್ ಪರಿಕರವನ್ನು ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಲಘು ಪೋಷಕಾಂಶಗಳ ಮಿಶ್ರಣ ಅಥವಾ ಬೆಳೆ ಸ್ಪೇಷಲ್ ಪರಿಕರವನ್ನು ವಿತರಿಸಲಾಗುತ್ತಿದೆ.
ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್, ಆರ್‌ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ನಕಲುಗಳೊಂದಿಗೆ ಶಿಕಾರಿಪುರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.
National Horticulture Mission Scheme ಹೆಚ್ಚಿನ ಮಾಹಿತಿಗಾಗಿ ತಮ್ಮ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ
Date:
