Monday, May 25, 2026
Monday, May 25, 2026

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Date:

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ ಶಿಕ್ಷಣಕ್ಕೆ ಕಂಪ್ಯೂಟರ್ ಅನುಕೂಲವಾಗಲಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಎನ್. ಪ್ರಕಾಶ್ ಹೇಳಿದರು.

ತಾಲೂಕಿನ ಆನವಟ್ಟಿ ಹೋಬಳಿಯ ಗುಡ್ಡದ ಬೆಣ್ಣಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿ ಸಹಯೋಗದೊಂದಿಗೆ ಕಂಪ್ಯೂಟರ್ ಮತ್ತು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಸಾಧ್ಯವಿದೆ. ಜೊತೆಗೆ ಆಧುನಿಕ ಯುಗದಲ್ಲಿ ಕಂಪ್ಯೂಟರ್ ಕಲಿಕೆ ಅತ್ಯಗತ್ಯ ಎನ್ನುವಂತಾಗಿದೆ. ಈ ನಿಟ್ಟಿನಲ್ಲಿ ಹಿಂದುಳಿದ ಪ್ರದೇಶಗಳ ಶಾಲೆಗಳನ್ನು ಗುರುತಿಸಿ ಕಂಪ್ಯೂಟರ್‌ಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.

Shivamogga News ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಪರಿಚಯ ಮಾಡಿಕೊಡುವ ಉದ್ದೇಶದಿಂದ ಕಂಪ್ಯೂಟರ್‌ನ್ನು ಕೊಡುಗೆಯಾಗಿ ನೀಡಲಾಗುತ್ತಿರುವುದು ಸ್ವಾಗತಾರ್ಹ. ಉತ್ತಮ ಕಲಿಕಾ ವಾತಾವರಣವನ್ನು ಸರ್ಕಾರಿ ಶಾಲೆಗಳಲ್ಲಿ ಕಲ್ಪಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಸುಧಾರಣೆಯಾಗಿದ್ದು, ಜಾಗತಿಕ ಬದಲಾವಣೆಗೆ ಹೊಂದಿಕೊಳ್ಳಲು ಕಂಪ್ಯೂಟರ್ ಕಲಿಕೆ ಅಗತ್ಯವಾಗಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮಪ್ಪ ಅಧ್ಯಕ್ಷತೆ ವಹಿಸಿದ್ದರು. ಬಾರಂಗಿ ಗ್ರಾಪಂ ಪಿಡಿಒ ರಮೇಶ್, ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ತಾಲೂಕು ಸಮಿತಿ ಅಧ್ಯಕ್ಷೆ ಕೆಂಚಮ್ಮ ರಮೇಶ್, ಮುಖ್ಯ ಶಿಕ್ಷಕ ಪಿ. ಗುತ್ಯಪ್ಪ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಶಿವಮೊಗ್ಗ ವಿಶು ಕುಮಾರ್ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...