Monday, May 25, 2026
Monday, May 25, 2026

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

Date:

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಇದಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಕ್ಷಯರೋಗಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಡಿಹೆಚ್‌ಓ ಡಾ. ನಟರಾಜ.ಕೆ.ಎಸ್ ತಿಳಿಸಿದರು.

ಶಿವಮೊಗ್ಗ ನಗರ ಆರೋಗ್ಯ ಕೇಂದ್ರ ತುಂಗಾನಗರ ವ್ಯಾಪ್ತಿಯ ನೇತಾಜಿ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಈ ವರ್ಷದ ಘೋಷಣೆಯಡಿ ಏರ್ಪಡಿಸಲಾಗಿದ್ದ “ಹೌದು, ಭಾರತದ ನೇತೃತ್ವದಲ್ಲಿ, ಜನರ ಶಕ್ತಿಯೊಂದಿಗೆ ನಾವು ಕ್ಷಯರೋಗವನ್ನು ನಿರ್ಮೂಲನೆ ಮಾಡಬಹುದು” ಎಂಬ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದುಶ್ಚಟಗಳಿಂದ ದೂರವಿದ್ದು, ಪೌಷ್ಟಿಕ ಆಹಾರ ತೆಗೆದುಕೊಳ್ಳುವುದರಿಂದ ಕ್ಷಯರೋಗ ಸೇರಿದಂತೆ ಯಾವುದೇ ರೋಗದಿಂದ ದೂರ ಉಳಿಯಬಹುದಾಗಿದೆ. ಕ್ಷಯ ರೋಗಿಗಳು ಸೂಕ್ತ ಚಿಕಿತ್ಸೆಯೊಂದಿಗೆ ಪೌಷ್ಟಿಕ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

World Tuberculosis Day ಕಳೆದ ವರ್ಷದಲ್ಲಿ ಭಾರತದಲ್ಲಿ 25 ಲಕ್ಷ ಟಿಬಿ ಪ್ರಕರಣಗಳು ವರದಿಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 1806 ಪ್ರಕರಣ ವರದಿಯಾಗಿದೆ. ಇತ್ತೀಚಿನ ವರ್ಷದಲ್ಲಿ ಕ್ಷಯ ರೋಗ ಹರಡುವ ಪ್ರಮಾಣ ಶೇ.21 ಕಡಿಮೆ ಯಾಗಿದೆ. ಈ ಪ್ರಮಾಣವನ್ನು ಇನ್ನೂ ತಗ್ಗಿಸುವ ಅವಶ್ಯಕತೆ ಇದ್ದು, ಶೀಘ್ರ ಪತ್ತೆ, ಪೌಷ್ಟಿಕ ಆಹಾರ ಮತ್ತು ಚಿಕಿತ್ಸೆಯಿಂದ ಇದು ಸಾಧ್ಯ ಎಂದರು.

ರೋಟರಿ ಸಂಸ್ಥೆಯ ಬಸವರಾಜ್ ಬಿ ಮಾತನಾಡಿ, ಸಂಸ್ಥೆಯ ವತಿಯಿಂದ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರವನ್ನು ನಿಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಹಕಾರ ನಿಡುತ್ತೇವೆ ಎಂದರು.

ಕಾರ್ಯಕ್ರಮದ ಅಂಗವಾಗಿ ಚಿಕಿತ್ಸೆಯಲ್ಲಿರುವವರಿಗೆ ಪೌಷ್ಟಿಕ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.

ಈ ಜಾಥಾ ಕಾರ್ಯಕ್ರಮದಲ್ಲಿ ತಮಟೆ ಜಗದೀಶ್ ಕಲಾ ತಂಡ ಭದ್ರಾವತಿ ಇವರು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬೀದಿ ನಾಟಕ ನಡೆಸಿಕೊಟ್ಟರು.
ಜಾಥಾವು ನೇತಾಜಿ ವೃತ್ತದಿಂದ ಜೆ.ಪಿ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸಿತು.

ಕಾರ್ಯಕ್ರಮದಲ್ಲಿ ಡಾ. ಕಿರಣ್.ಎಸ್.ಕೆ ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳು, ಡಾ. ಚಂದ್ರಶೇಖರ್ ಟಿ.ಹೆಚ್.ಒ, ಐ.ಎಂ.ಎ ಯ ಅಧ್ಯಕ್ಷರು ಹಾಗೂ ಸದಸ್ಯರು ಆದ ಡಾ. ರವೀಶ, ಡಾ. ಸುಭ್ರತಾ, ಡಾ. ಕೌಸ್ತುಬ ಹಾಗೂ ರೋಟರಿ ಸಂಸ್ಥೆಯ ಅಧ್ಯಕ್ಷರು ಹಾಗೂ ಸದಸ್ಯರಾದ ಬಸವರಾಜ್, ಕಿರಣ್ ಮತ್ತು ಇತರರು, ಮಹಮ್ಮದ್ ನಜೀರ್ ಅಧ್ಯಕ್ಷರು ನೂರುಲ್ಲಾ ಇಸ್ಲಾಂ ಮಸೀದಿ, ನಜೀಮಾ, ಜೈ ಕರ್ನಾಟಕ ಮಹಿಳಾ ಸದಸ್ಯರು, ಸಮಾಜ ಸೇವಕ ಬಸವರಾಜಪ್ಪ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ನಂಜಪ್ಪ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ರೀನಿವಾಸ್ ಸ್ವಾಗತಿಸಿ, ಶ್ರೀ ಕುಮಾರ್ ಎಸ್ ನಿರೂಪಿಸಿದರು. ಜಾಥಾ ಕಾರ್ಯಕ್ರಮವನ್ನು ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಸಮಾಪ್ತಿಗೊಳಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...