Online shopping ಇತ್ತೀಚಿನ ಕಾಲಮಾನದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದೆ. ಆನ್‌ಲೈನ್ ಶಾಪಿಂಗ್ ಅನುಕೂಲಕರ ಹಾಗೂ ಲಾಭದಾಯಕ ಎಂದೆನಿಸಿದರೂ ಕೂಡ ವಂಚನೆ, ಗುಣಮಟ್ಟದ ಖಾತ್ರಿಯ ಕೊರತೆ, ನಕಲಿ ಉತ್ಪನ್ನಗಳ ಮಾರಾಟ ಮತ್ತು ಡೇಟಾ ಸೋರಿಕೆಯ ಅಪಾಯಗಳಿರುವುದರಿಂದ ಜಾಗರೂಕರಾಗಿದ್ದು ಜಾಣರಾಗಿರಿ ಎಂದು ಜಿಲ್ಲಾ ನಿವೃತ್ತ ನ್ಯಾಯಾಧೀಶರು ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ ಎಚ್ಚರಿಸಿದರು.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಹಾಗೂ ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 26ರ ಗುರುವಾರ ಮಧ್ಯಾಹ್ನ ಕೋಟೆ ರಸ್ತೆಯ ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರವು 1986ರಲ್ಲಿ ಗ್ರಾಹಕ ಹಕ್ಕುಗಳ ಕಾಯ್ದೆ ಜಾರಿಗೊಳಿಸಿದೆ. ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರೂ ಗ್ರಾಹಕರೇ. ಗ್ರಾಹಕರಿಗೆ ನ್ಯಾಯಯುತ, ಯೋಗ್ಯ ಹಾಗೂ ಗುಣಮಟ್ಟದ ಸರಕು ಮತ್ತು ಸೇವೆಗಳನ್ನು ನೀಡುವ ಜವಾಬ್ದಾರಿ ವ್ಯಾಪಾರಸ್ಥರದ್ದು. ಯಾವುದೇ ವಸ್ತುಗಳನ್ನು ಕೊಡುವವನ ತೃಪ್ತಿಗಾಗಿ ಕೊಳ್ಳುವುದಲ್ಲ, ಅಲ್ಲಿ ಗ್ರಾಹಕರ ಸಂತೃಪ್ತಿಯೇ ಮುಖ್ಯ. ಸುರಕ್ಷತೆ, ಆಯ್ಕೆ ಹಾಗೂ ಆರೋಗ್ಯಪೂರ್ಣ ಪರಿಸರ ಹೊಂದುವ ಹಕ್ಕನ್ನು ಕಾಯ್ದೆಯು ಎಲ್ಲಾ ಗ್ರಾಹಕರಿಗೂ ನೀಡಿದೆ ಎಂದರು.
ಗ್ರಾಹಕರು ಮೋಸ ಹೋದ ಬಳಿಕ ಎಚ್ಚೆತ್ತು ಕೊಳ್ಳುವ ಬದಲು ಜಾಗೃತರಾಗಿರುವುದು ಉತ್ತಮ. ಗ್ರಾಹಕರ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಗ್ರಾಹಕ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಸಹ ಮೋಸ ಹೋಗುವುದು ತಪ್ಪುತ್ತಿಲ್ಲ. ಆಕಸ್ಮಿಕವಾಗಿ ಮೋಸ ಹೋದಾಗ ಗ್ರಾಹಕರ ರಕ್ಷಣೆಗೆ ಇರುವ ಕಾಯ್ದೆಗಳ ಬಗ್ಗೆ ಅರಿವು ಹೊಂದಿ ನ್ಯಾಯ ಪಡೆಯಬೇಕೆಂದರು.
Online shopping ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ಪ್ರಶಾಂತ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಬಿ.ಡಿ. ಯೋಗಾನಂದ, ವಾಸವಿ ವಿದ್ಯಾಲಯದ ಕಾರ್ಯದರ್ಶಿ ಎಸ್.ಕೆ. ಶೇ಼಼ಷಾಚಲ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಚಾಲಕ ಎಂ.ಎಂ. ಜಯಸ್ವಾಮಿ, ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕರಾದ ಸಿ.ಎಂ. ಧನಲಕ್ಷ್ಮೀ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಡಿ. ಸತೀಶ್, ಸಹಾಯಕ ನಿರ್ದೇಶಕರಾದ ಲಕ್ಷ್ಮೀ ಉಪಸ್ಥಿತರಿದ್ದರು.
ಕಾನೂನು ಮಾಪನ ಶಾಸ್ತç ಇಲಾಖೆ ವತಿಯಿಂದ ತೂಕ ಮತ್ತು ಅಳತೆಯ ಬಗ್ಗೆ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ಲೋಲಾಕ್ಷಿ ಮತ್ತು ತಂಡ ಸ್ವಾಗತಿಸಿ, ಎಂ. ಮೇಘನಾ ಸ್ವಾಗತಿಸಿದರು.
