Saturday, October 10, 2026
Saturday, October 10, 2026

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Date:

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಅಗ್ನಿ ಬನ್ನಿರಾಯ ಸ್ವಾಮಿ ಜಯಂತಿ ಕಾರ್ಯಕ್ರಮವನ್ನು‌ ತಿಗಳ ಸಮಾಜದ ಮುಖಂಡರು ಹಾಗೂ ಅಧಿಕಾರಿಗಳು ಉದ್ಘಾಟಿಸಿದರು.
ಈ ವೇಳೆ ಸಮಾಜದ ಮುಖಂಡರಾದ ಆನಂದ್ ಮಾತನಾಡಿ, ಅಗ್ನಿ ವಂಶ ಕ್ಷತ್ರಿಯರ ಕುಲ ಪುರುಷರಾದ ಶ್ರೀ ಅಗ್ನಿ ಬನ್ನಿರಾಯನ ಇತಿಹಾಸವನ್ನು ನಾವೆಲ್ಲಾ ತಿಳಿದುಕೊಳ್ಳಬೇಕು. ನಮ್ಮ ಮೂಲ ಪುರುಷರ ತತ್ವಗಳು, ಆದರ್ಶಗಳನ್ನು ಅನುಸರಿಸಿ, ಮುಂದುವರೆಸಿಕೊಂಡು ಹೋಗೋಣವೆಂದು ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ಮಾತನಾಡಿ, ಅಗ್ನಿ ವಂಶ ಕ್ಷತ್ರಿಯರ ಕುಲ ಪುರುಷರಾದ ಶ್ರೀ ಅಗ್ನಿ ಬನ್ನಿರಾಯನ ಇತಿಹಾಸವನ್ನು ನಾವು ಅಗ್ನಿಪುರಾಣದಲ್ಲಿ ಕಾಣಬಹುದು. ಭೂಮಂಡಲದಲ್ಲಿ ಅರಾಜಕತೆ ತಾಂಡವವಾಡುತ್ತಿದ್ದಾಗ ಸಮಸ್ತ ಜೀವ ಸಂಕುಲವನ್ನು ರಕ್ಷಿಸುವ ಸಂದಂರ್ಭ ಒದಗಿ ಬರುತ್ತದೆ. ಅಂತಹ ಸಮಯದಲ್ಲಿ ಶಂಭು ಮಹರ್ಷಿಗಳ ನೇತೃತ್ವದಲ್ಲಿ ಸಪ್ತ ಮಹರ್ಷಿಗಳು ಸೇರಿ ಇದೀಗ ಮೌಂಟ್ ಅಬು ಎಂದು ಕರೆಯಲಾಗುವ ಅರ್ಬುದಾಂಚಲ ಪರ್ವತದ Department of Kannada and Culture ಮೇಲೆ ಯಾಗವನ್ನು ನಡೆಸುತ್ತಾರೆ. ಅಲ್ಲಿಗೆ ಆಗಮಿಸಿದ ತ್ರಿಮೂರ್ತಿಗಳು ಯಾಗಕ್ಕೆ ಕಾಮಧೇನುವಿನ ತುಪ್ಪದಿಂದ ಆಹುತಿಯನ್ನು ನೀಡುತ್ತಾರೆ. ಮಾತ್ರವಲ್ಲದೆ ಪರಶಿವನು ತನ್ನ ಮೂರನೇ ಕಣ್ಣಿನಲ್ಲಿ ಮೂಡಿದ ಹನಿಯನ್ನು ಕೆಂದಾವರೆ ಪುಷ್ಪದೊಡನೆ ಯಜ್ಞಕುಂಡಕ್ಕೆ ಅರ್ಪಣೆ ಮಾಡುತ್ತಾರೆ. ಆಗ ಶಿವನ ಅಂಶದಿಂದ ಮೀನ ಮಾಸ ಉತ್ತರ ನಕ್ಷತ್ರದ ದಿನದಂದು ಪ್ರಜ್ವಲಿಸುವ ಅಗ್ನಿಯಿಂದ ಕುದುರೆಯ ಮೇಲೆ ಕುಳಿತು ಪ್ರತ್ಯಕ್ಷರಾದವರೇ ಶ್ರೀ ಅಗ್ನಿ ಬನ್ನಿ ಮಹಾರಾಜರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ‌ ಸಮಾಜದ ಮುಖಂಡರಾದ ಸಿದ್ದಲಿಂಗಪ್ಪ ಆನಂದ್, ವೆಂಕಟೇಶ್, ಅನಿತಾ, ಶೃತಿ ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...