S.N. Channabasappa ಸರಳತೆಯೇ ಸಂಸ್ಕೃತಿ, ಹಿರಿಯರ ಅನುಭವವೇ ಆಸ್ತಿ : ಆದಿಚುಂಚನಗಿರಿ ಮಠದಲ್ಲಿ ಸಾಮೂಹಿಕ ವಿವಾಹ ಹಾಗೂ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ಸಂಭ್ರಮ!
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖಾ ಮಠದಲ್ಲಿ ಇಂದು ಪೂಜ್ಯಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ 27ನೇ ವರ್ಷದ ಸರಳ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಅತ್ಯಂತ ಹರ್ಷದಿಂದ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ದಶಕಗಳ ಕಾಲ ಸುಖಮಯ ದಾಂಪತ್ಯ ನಡೆಸಿದ ಆದರ್ಶ ಹಿರಿಯ ದಂಪತಿಗಳನ್ನು ಸನ್ಮಾನಿಸುವ ಮೂಲಕ ಅವರನ್ನ ಗೌರವಿಸಲಾಯಿತು.
S.N. Channabasappa ಪೂಜ್ಯ ಸ್ವಾಮೀಜಿಯವರ ಆಶೀರ್ವಚನಗಳು ಮತ್ತು ಮಠದ ಈ ಜನಪರ ಕಾರ್ಯಗಳು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಶಾಸಕ ಚೆನ್ನಿ ಹೇಳಿದರು. ನವದಂಪತಿಗಳ ಜೀವನ ಸುಖಮಯವಾಗಿರಲಿ ಹಾಗೂ ಭಗವಂತನ ಕೃಪೆ ಸದಾ ಎಲ್ಲರ ಮೇಲಿರಲಿ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು.
