Thursday, April 2, 2026
Thursday, April 2, 2026

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Date:

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ ಮಂಡನೆ, ವಿಮರ್ಶಾ ಸಾಮರ್ಥ್ಯ, ವಾಕ್ಚಾತುರ್ಯ, ಸಂವಹನ ಕೌಶಲ್ಯ, ನೀತಿ ರೂಪಿಸುವ ಸಾಮರ್ಥ್ಯ ಇರುವವರನ್ನು ಉತ್ತಮ ನಾಯಕ ಎಂದು ಪರಿಗಣಿಸಲಾಗುತ್ತದೆ. ನಾಯಕತ್ವ ಗುಣ ರೂಪಿಸುಕೊಳ್ಳುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿಯಾಗಿದೆ ಎಂದು ಸಹ ಎಂದು ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಜೆ.ಎಂ. ನಾಗಯ್ಯ ಹೇಳಿದರು

ತಾಳಗುಂದದಲ್ಲಿರುವ ಶ್ರೀ ವೀರಭದ್ರೇಶ್ವರ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಏಪ್ರಿಲ್ 2ರ ಗುರುವಾರ ಬೆಳಿಗ್ಗೆ ಸದರಿ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ 2025- 26ನೇ ಸಾಲಿನ ಸಾಂಸ್ಕೃತಿಕ ವೇದಿಕೆ ಮತ್ತು ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಹಾಗೂ ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಕಾಲೇಜಿನ ಹಂತದಲ್ಲಿ ವಿದ್ಯಾರ್ಥಿ ಸಂಸತ್ತು ರೂಪಿಸಿರುವುದು ಉತ್ತಮ ಫಲಿತಾಂಶ ನೀಡುತ್ತಿದೆ. ಪ್ರಜಾಪ್ರಭುತ್ವದ ಆಶಯಗಳು ಬಲವರ್ಧನೆಗೊಳ್ಳಲು ವಿದ್ಯಾರ್ಥಿ ಸಂಸತ್ತು ಸಹಕಾರಿಯಾಗಿದೆ ಎಂದರು.

ಶಿಕ್ಷಣವನ್ನು ಪರ ಹಾಗೂ ಅಪರ ವಿದ್ಯೆ ಎಂದು ವಿಂಗಡಿಸಬಹುದಾಗಿದೆ. ಆತ್ಮಜ್ಞಾನ ಹಾಗೂ ಆತ್ಮ ವಿಕಸನಕ್ಕೆ ಪಡೆಯುವ ವಿದ್ಯೆಯನ್ನು ಪರ ವಿದ್ಯೆ ಎಂದೂ ಲೌಕಿಕ ಸುಖಕ್ಕೆ ಸಾಧಕವನ್ನಾಗಿ ಕಲಿಯುವ ವಿದ್ಯೆಯನ್ನು ಅಪರ ವಿದ್ಯೆ ಎಂದು ಪರಿಗಣಿಸಬಹುದಾಗಿದೆ. ಹಿಂದಿನ ಕಾಲದಲ್ಲಿ ಪರ ವಿದ್ಯೆ ಎಂದರೆ ಶಿಕ್ಷಣವನ್ನು ಆತ್ಮಜ್ಞಾನ ಅಥವಾ ಮೋಕ್ಷ ಪಡೆಯಲು ಅಧ್ಯಯನ ಮಾಡುತ್ತಿದ್ದರು. ಆದರೆ ಆಧುನಿಕ ಕಾಲಘಟ್ಟದಲ್ಲಿ ಪರ ಹಾಗೂ ಅಪರ ವಿದ್ಯೆಗಳೆರೆಡೂ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಶ್ರೀ ವೀರಭದ್ರೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಪರಮೇಶ ಹ. ಮಸಲವಾಡ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಧಾರವಾಡದ ಹುರಿಕಡ್ಲಿ ಅಜ್ಜ ಮಹಿಳಾ ಪದವಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯರಾದ ಡಾ. ರಾಜೇಶ್ವರಿ ಸಾಲಿ, ಹಂಸಭಾವಿ ಎಂಎಎಸ್‌ಸಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಎಂ.ಎA. ಅಕ್ಕಿ, ವಿಶೇಷ ಆಹ್ವಾನಿತರಾಗಿ ಶ್ರೀ ವೀರಭದ್ರೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜೆ.ಪಿ. ಸುನೀಲ್ ಕುಮಾರ ಆಗಮಿಸಿದ್ದರು.

Karnataka University ಸಾಂಸ್ಕೃತಿಕ ವೇದಿಕೆ ಕಾರ್ಯಾಧ್ಯಕ್ಷ ವೈ.ಹೆಚ್. ರಾಜು, ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಪಿ.ಹೆಚ್. ಮಾಲತೇಶ, ಎಂ. ಸುಚಿತ್ರಾ, ಎಂ. ವಿನಾಯಕ, ಬಿ. ಭೂಮಿಕಾ ಮತ್ತಿತರರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದವರಿಗೆ ಡಿ. ಗುರುರಾಜ್ ಪ್ರಮಾಣ ವಚನ ಬೋಧಿಸಿದರು. ಪ್ರೊ.ಜೆ.ಎಂ. ನಾಗಯ್ಯ ಮತ್ತು ಡಾ. ರಾಜೇಶ್ವರಿ ಸಾಲಿ ಅವರನ್ನು ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

S.N. Channabasappa ಮಳೆಗೆ ಸಿಕ್ಕ ವಿವಿಧ ಬಡಾವಣೆಗಳಿಗೆ ಶಾಸಕ ಚನ್ನಬಸಪ್ಪ ಭೇಟಿ: ಶಾಶ್ವತ ಪರಿಹಾರಕ್ಕೆ ಸೂಚನೆ

S.N. Channabasappa ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ...