B.Y. Raghavendra ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಜಿ ಅವರನ್ನು
ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿದ್ದರು.
ಅಡಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿ, ಅಡಿಕೆ ಕೃಷಿಕರ ಭವಿಷ್ಯದ ಬಗ್ಗೆ ಕಾಳಜಿ ತಾಳಲು ಸಚಿವರ ಗಮನ ಸೆಳೆದರು.
WHO/IARC ವರ್ಗೀಕರಣ ಹಾಗೂ ಕೊಲಂಬೊ ಘೋಷಣೆಯ ನಂತರದ ಬೆಳವಣಿಗೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೇ ಇದು ರೈತರು ಮತ್ತು ಗ್ರಾಮೀಣ ಜೀವನೋಪಾಯದ ಮೇಲೆ ಬೀರುವ ಪರಿಣಾಮವನ್ನು ಸಂಸದರು ಒತ್ತಿಹೇಳಿದರು
B.Y. Raghavendra ಮಾನ್ಯ ಸಚಿವರು ವಿಷಯವನ್ನು ಸಕಾರಾತ್ಮಕವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಬಿ.ವೈರಾಘವೇಂದ್ರ ಸಚಿವರ ಭೇಟಿಯ ಬಗ್ಗೆ
ಹರ್ಷ ವ್ಯಕ್ತಪಡಿಸಿದ್ದಾರೆ.
