Friday, October 9, 2026
Friday, October 9, 2026

ಜಿಲ್ಲೆಯಲ್ಲಿ ಆಟೋ ಎಲ್.ಪಿ.ಜಿ ಮತ್ತು ಸಿ ಎನ್ ಜಿ ಬಂಕ್ ಗಳಲ್ಲಿ ಸರ್ಕಾರಿ ದರದಲ್ಲೇ ಮಾರಾಟ ಕಡ್ಡಾಯ- ಡೀಸಿ ಪ್ರಭುಲಿಂಗ ಕವಳಿಕಟ್ಟಿ

Date:

ಶಿವಮೊಗ್ಗ ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ ಮತ್ತು ಸಿಎನ್‌ಜಿ ಬಂಕ್‌ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ದರ ಪ್ರದರ್ಶನ ಕಡ್ಡಾಯ: ತೈಲ ಕಂಪನಿಗಳು ಅಥವಾ ಖಾಸಗಿ ಸಂಸ್ಥೆಗಳು ನಿಗದಿಪಡಿಸಿದ ದರದ ವಿವರವನ್ನು ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಕಾಣುವಂತೆ ಬಂಕ್‌ಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.

ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ಪಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಕಾನೂನು ಕ್ರಮದ ಎಚ್ಚರಿಕೆ: ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧ ‘ಅಗತ್ಯ ವಸ್ತುಗಳ ಕಾಯ್ದೆ-1955’ ಮತ್ತು ‘ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯುಲೇಷನ್ ಆಫ್ ಯೂಸ್ ಇನ್ ಮೋಟರ್ ವೆಹಿಕಲ್ಸ್) ಆರ್ಡರ್-2001’ ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...