Saturday, October 10, 2026
Saturday, October 10, 2026

DVS Independent College ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ.ಡಿವಿಎಸ್ ಪದವಿ ಪೂರ್ವ ಕಾಲೇಜಿನ ಗಮನಾರ್ಹ ಸಾಧನೆ.

Date:

DVS Independent College ದ್ವಿತೀಯ ಪಿಯು ಪರೀಕ್ಷೆಯಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿಪೂರ್ವ ( ಸ್ವತಂತ್ರ) ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ‍್ಯಾಂಕ್ ಗಳಿಸಿದ್ದಾರೆ.
ಡಿವಿಎಸ್ ಪದವಿಪೂರ್ವ ( ಸ್ವತಂತ್ರ) ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಶೇ. 97.92, ವಾಣಿಜ್ಯ ವಿಭಾಗದಲ್ಲಿ ಶೇ. 97.30 ಮತ್ತು ಕಲಾ ವಿಭಾಗದಲ್ಲಿ ಶೇ 95.83 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 631 ವಿದ್ಯಾರ್ಥಿಗಳಲ್ಲಿ 216 ಅತ್ಯುನ್ನತ ಶ್ರೇಣಿ, 351 ಪ್ರಥಮ ಶ್ರೇಣಿ ಹಾಗೂ 38 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಎನ್.ಎಸ್.ವಸಿಷ್ಠ 595 ಅಂಕ ಪಡೆಯುವ ರಾಜ್ಯಕ್ಕೆ ಆರನೇ ರ‍್ಯಾಂಕ್ ಪಡೆದಿದ್ದು, ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾನೆ. ಪಿ.ಪೃಥ್ವಿ, ಕೆ.ಎನ್.ಸ್ನೇಹ, ಮೊಹಮ್ಮದ್ ಹುಸೇನ್ ಪಿಯು ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 591 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಪಿ.ಬೃಂದಾ 590 ಅಂಕ ಪಡೆದು ರಾಜ್ಯಮಟ್ಟದಲ್ಲಿ 7ನೇ ಸ್ಥಾನ ಪಡೆದಿದ್ದು, ಹರಿಪ್ರಿಯಾ ಪಿ.ಸೊರಬ 587 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 10ನೇ ಸ್ಥಾನ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಡಿವಿಎಸ್ ಸಂಸ್ಥೆಯ ನೂತನ ಆಡಳಿತ ಮಂಡಳಿ ನೇತೃತ್ವದಲ್ಲಿ ಸಂಪಾದಿಸಿ ಪ್ರಕಟಿಸಲಾದ ಚೊಚ್ಚಲ ಮಾಸಿಕ ಪತ್ರಿಕೆ ಡಿವಿಎಸ್ DVS Independent College ದೀವಿಗೆಯನ್ನು ಗುರುವಾರ ಬಿಡುಗಡೆಗೊಳಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ನೌಕರರ ಸಾಹಿತ್ಯಾಭಿರುಚಿ ಪ್ರೋತ್ಸಾಹಿಸುವ ದೃಷ್ಟಿಯಿಂದ “ಡಿವಿಎಸ್ ದೀವಿಗೆ” ಸಹಕಾರಿಯಾಗಲಿದೆ. ಆಡಳಿತ ಮಂಡಳಿ ಪದಾಧಿಕಾರಿಗಳು ಸಂಚಿಕೆ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಡಿವಿಎಸ್ ಆಡಳಿತ ಮಂಡಳಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎರಡು ನೂತನ ಬಸ್ ಉದ್ಘಾಟಿಸಲಾಯಿತು.
ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ರಾಜ್ಯಮಟ್ಟದ ಸಾಧನೆಗೆ ಡಿವಿಎಸ್ ಅಧ್ಯಕ್ಷ ಕೆ.ಬಸಪ್ಪ ಗೌಡ, ಕಾರ್ಯದರ್ಶಿ ಎಸ್.ಪಿ.ದಿನೇಶ್ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...