Wednesday, September 16, 2026
Wednesday, September 16, 2026

S. N. Channabasappa ಶಿಕಾರಿಪುರ ಬಸ್ ಅಪಘಾತ. ಗಾಯಾಳುಗಳ ಕ್ಷೇಮ ವಿಚಾರಿಸಿದ ಶಾಸಕ ಚನ್ನಿ.

Date:

S. N. Channabasappa ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ನಿನ್ನೆ ಬೆಳಿಗ್ಗೆ ಸಂಭವಿಸಿದ ಖಾಸಗಿ ಬಸ್ ಅಪಘಾತದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಯಿತು ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಕಳಕಳಿ ವ್ಯಕ್ತಪಡಿಸಿದ್ದಾರೆ.

ಈ ದುರ್ಘಟನೆಯಲ್ಲಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಪ್ರಯಾಣಿಕರನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಅವರೊಂದಿಗೆ ಶಾಸಕರು ಭೇಟಿ ಮಾಡಿ, ಅವರ ಆರೋಗ್ಯದ ಸ್ಥಿತಿಗತಿಯನ್ನು ವಿಚಾರಿಸಿದರು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ವೈದ್ಯರಿಗೆ ಸೂಚಿಸಿದರು.
ಹಾಗೂ ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದರು

S. N. Channabasappa ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಅಪಘಾತದಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕ ಚನ್ನಬಸಪ್ಪ ಸಾಮಾಜಿಕ ತಾಣದಲ್ಲಿ
ತಮ್ಮ ಕಾಳಜಿಯನ್ನ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...