Thursday, September 17, 2026
Thursday, September 17, 2026

B.Y. Vijayendra ಸ್ವಾತಂತ್ರ್ಯಾನಂತರ ಡಾ.ಅಂಬೇಡ್ಕರ್ ಅವರಿಗೆ ಗೌರವ ಕೊಡುವ ಕೆಲಸ ಬಿಜೆಪಿ ಮಾಡಿದೆ- ಬಿ.ವೈ.ವಿಜಯೇಂದ್ರ

Date:

B.Y. Vijayendra ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಬಹಳ ಅರ್ಥಪೂರ್ಣವಾಗಿ ಬಿಜೆಪಿಯವರು ಆಚರಣೆ ಮಾಡುತ್ತಿದ್ದೇವೆ.ನೆನ್ನೆ ಎಲ್ಲಾ ನಗರದ ಅಂಬೇಡ್ಕರ್ ಅವರ ಪುತ್ತಳಿ ಸ್ವಚ್ಛತೆ ಮಾಡುವುದು.ದೀಪಗಳನ್ನು ಪ್ರಜ್ವಲಿಸುವ ಮೂಲಕ ಅವರ ಜನ್ಮದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿದ್ದೇವೆ ಎಂದರು.

ಸ್ವತಂತ್ರ ನಂತರ ಅಂಬೇಡ್ಕರ್ ಅವರಿಗೆ ಗೌರವವನ್ನು ಕೊಡುವ ಕೆಲಸ ಬಿಜೆಪಿ ಮಾಡಿದೆ.
ಅಂಬೇಡ್ಕರ್ ಅವರ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳು ಮುಂದಾಳತ್ವವನ್ನು ವಹಿಸಿದ್ದಾರೆ.

ಕಾಂಗ್ರೆಸ್ ಅಂಬೇಡ್ಕರ್ ಅವರ ಹೆಸರನ್ನ ಇಟ್ಟುಕೊಂಡು ಶೋಷಿತ ವರ್ಗದವರ ವೋಟ್ ಬ್ಯಾಂಕಿಗಾಗಿ ದುರುಬಳಕೆ ಮಾಡಿಕೊಂಡಿದೆ.
ಅಂಬೇಡ್ಕರ್ ಅವರ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಕಾಂಗ್ರೆಸ್ಗರು, ಎರಡು ಬಾರಿ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಉಪಚುನಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಾದಿಯಾಗಿ ಕಾಂಗ್ರೆಸ್ ನವರು ಏನೇ ಪುಂಗಿಬಾರಿಸಿದರು. ಎರಡು ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲುತ್ತದೆ.
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಹೇಳಿದರು.

ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ. ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ.
ಆಡಳಿತ ಯಂತ್ರ ಕುಸಿದಿರುವುದು ಹಾಗೂ ಮುಖ್ಯಮಂತ್ರಿಯ ಕುರ್ಚಿ ಗಾಗಿ ಪೈಪೋಟಿಯಲ್ಲಿ ಬೀದಿ ಕಾಳಗ ನಡೆಯುತ್ತಿದೆ ಎಂದು ಹೇಳಿದರು.

B.Y. Vijayendra ಅಭಿವೃದ್ಧಿ ಕೂಡ ರಾಜ್ಯದಲ್ಲಿ ಇಲ್ಲ. ಕಾಂಗ್ರೆಸ್ ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ ಎಂದರೆ ಅಲ್ಪಸಂಖ್ಯಾತರ ಓಲೈಕೆ ಮಾಡಿಕೊಂಡು ಹಿಂದುಗಳಿಗೆ ಅಪಮಾನ ಮಾಡುತ್ತಿದ್ದಾರೆ‌ ಎಂದು ತಿಳಿಸಿದರು.

ಇದರ ಎಲ್ಲದರ ಪರಿಣಾಮ ಎರಡು ಕ್ಷೇತ್ರದಲ್ಲಿ ಬಿಜೆಪಿ ಆಶೀರ್ವಾದ ಮಾಡಲಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳಿಗೆ ನಾನು ಸವಾಲನ್ನು ಹಾಕುತ್ತೇನೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಯಲ್ಲಿ ಇದ್ದಾಗ ಏನು ಅಭಿವೃದ್ಧಿ ಕಾರ್ಯಗಳಾಗಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೇಲೆ ಮೈಸೂರಿಗೆ ಏನು ಅಭಿವೃದ್ಧಿ ಕೆಲಸಗಳಾಗಿವೆ ಎಂದು ಹೇಳಿದರು.

ಈ ಬಗ್ಗೆ ಬಹಿರಂಗವಾಗಿ ಚರ್ಚೆಗೆ ಬರಲಿ. ದುರಂತವೆಂದರೆ ಮೈಸೂರಿನಲ್ಲಿ ಎಂ ಎಸ್ ಐ ಎಲ್ ಉಳಿಸಿಕೊಳ್ಳಲು ಆಗುತ್ತಿಲ್ಲ. ಎಂಎಸ್ಐಎಲ್ ಅನ್ನು ಮಚ್ಚಿ ಅಲ್ಲೊಂದು ಸ್ಟೇಡಿಯಂ ಮಾಡಲು ಹೊರಟಿದ್ದಾರೆ.ಇವರಿಗೆ ಅಭಿವೃದ್ಧಿಯ ಮೇಲೆ ಯಾವುದೇ ಕಾಳಜಿ ಇಲ್ಲ.
ನಾಲ್ಕನೇ ತಾರೀಕು ಜನರು ಇದಕ್ಕೆ ಸರಿಯಾಗಿ ಉತ್ತರ ಕೊಡುತ್ತಾರೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...