Sunday, August 2, 2026
Sunday, August 2, 2026

2026-27 ನೇ ಸಾಲಿಗೆ ಖಾಸಗಿ ಕೃಷಿ ಕಾಲೇಜು ಆರಂಭಿಸಲು ನೋಂದಾಯಿತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Date:

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಯೋಜಿತ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾಲೇಜು ಸಂಯೋಜನೆ ಬಯಸುವ ಕಾನೂನು ಬದ್ದ ಶೈಕ್ಷಣಿಕ ಸಂಸ್ಥೆಗಳು ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳು/ ಹೊಸೈಟಿಗಳು /ಟ್ರಸ್ಟ್ ಗಳಿಂದ ಅರ್ಜಿ ಆಹ್ವಾನಿಸಿದೆ.
ಬಿ.ಎಸ್ಸಿ. (ಹಾನರ್ಸ್) ಕೃಷಿ (ಬಿಎಸ್‌ಸಿ (ಹಾನ್ಸ್) ಕೃಷಿ), ಬಿ.ಟೆಕ್ ಕೃಷಿ ಇಂಜಿನಿಯರಿಂಗ್ ಬಿ.ಟೆಕ್ (ಕೃಷಿ ಇಂಜಿನಿಯರಿAಗ್) ಬಿ.ಟೆಕ್.ಕೃಷಿ ಬಯೋಟೆಕ್ನಾಲಜಿ ಬಿ.ಟೆಕ್ (ಕೃಷಿ ಬಯೋಟೆಕ್ನಾಲಜಿ), ಬಿ.ಟೆಕ್ ಫುಡ್ ಟೆಕ್ನಾಲಜಿ ಬಿ.ಎಸ್ಸಿ (ಹಾನರ್ಸ್) ಅರಣ್ಯ (ಬಿಎಸ್ಸಿ ಹಾನರ್ಸ್), ಅರಣ್ಯಶಾಸ್ತç, ಬಿಎಸ್ಸಿ (ಹಾನರ್ಸ್) ಕಮ್ಯೂನಿಟಿ ವಿಜ್ಞಾನ (ಬಿಎಸ್ಸಿ (ಹಾನ್ಸ್)ಸಮುದಾಯ ವಿಜ್ಞಾನ), ಬಿಎಸ್ಸಿ (ಹಾನರ್ಸ್) ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್ (ಬಿಎಸ್ಸಿ.(ಹಾನ್ಸ್) ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್ ಬಿಎಸ್ಸಿ(ಹಾನರ್ಸ್) ತೋಟಗಾರಿಕೆ(ಬಿಎಸ್ಸಿ (ಹಾನ್ಸ್)ತೋಟಗಾರಿಕೆ ಮತ್ತು ಬಿಎಸ್ಸಿ (ಹಾನರ್ಸ್) ರೇಷ್ಮೆ (ಬಿಎಸ್ಸಿ (ಹಾನ್ಸ್) ರೇಷ್ಮೆ ಸಾಕಾಣಿಕೆ) ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಅರ್ಜಿ ಹಾಗೂ ಮಾಹಿತಿಯನ್ನು www.uahs.edu.in ಜಾಲತಾಣದಿಂದ ಪಡೆದು, ಮೇ.06 ರೊಳಗೆ ಸೂಕ್ತ ದಾಖಲಾತಿಯೊಂದಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ನಂತರ (KSNUAHS-MSACR 2025) ರ ಪ್ರಕಾರ ಅವುಗಳನ್ನು ಪರೀಶೀಲಿಸಿ ನಿಯಮದಂತೆ ಪ್ರಕ್ರಿಯೆ ನಡೆಸಲಾಗುವುದು. ಅರ್ಜಿ ಸಲ್ಲಿಸುವ ಮುನ್ನ ನಿಬಂಧನೆಗಳನ್ನು ಸಂಪೂರ್ಣ ಪರಾಮರ್ಶಿಸಿ ಅದರಂತೆ ಅರ್ಜಿ ಸಲ್ಲಿಸುವುದು. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಈ ಸಾಲಿಗೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರ ಹಾಗೂ ನಿಬಂಧನೆಗಳು ಮತ್ತು ಅರ್ಜಿಗಾಗಿ www.uahs.edu.in ಜಾಲತಾಣಕ್ಕೆ ಬೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯವು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...