Thursday, September 17, 2026
Thursday, September 17, 2026

ಏಪ್ರಿಲ್ 20 ರ ಸಂಜೆ 5.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿ

Date:

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 20 ರ ಸಂಜೆ 5.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ವಿಶ್ವಮಾನವ, ಮಹಾನ್ ಮಾನವತಾವಾದಿ, ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಭದ್ರಾವತಿಯ ಆಧ್ಯಾತ್ಮಿಕ ಚಿಂತಕರು ಹಾಗೂ ಮನೋ ಚಿಕಿತ್ಸಕರಾದ ಡಾ. ಸಂತೋಷ್ ಕುಮಾರ್‌ರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...