Thursday, June 18, 2026
Thursday, June 18, 2026

ಏಪ್ರಿಲ್ 23, ಶ್ರೀಭಗೀರಥ ಜಯಂತಿ ಆಚರಣೆಗೆ ಸಿದ್ಧತೆ, ಮಾಹಿತಿ

Date:

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಪ್ಪಾರ ಸಮಾಜ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಏ.23 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಬಾಗಲಕೋಟೆ ಜಿಲ್ಲೆಯ ಮುದೋಳ್ ತಾಲೂಕಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರರಾದ ನಾಗರಾಜ್ ಶಿರೇಳ್ ರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...