Thursday, September 17, 2026
Thursday, September 17, 2026

University of Mysore ಮಾಸ್ಟರ್ ಆಫ್ ವಿಜ್ಯುವಲ್ ಆರ್ಟ್ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

Date:

University of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ಶೈಕ್ಷಣಿಕ ವರ್ಷದ ಎಂಟು ಸೆಮಿಸ್ಟರ್‌ಗಳ ರಾಷ್ಟ್ರೀಯ ಶಿಕ್ಷಣ ಪದ್ದತಿಯ ದೃಶ್ಯ ಕಲೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ.ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಾಗೂ ದ್ವಿತೀಯ ಪಿ.ಯು.ಸಿ.ಗೆ ಸಮಾನಾಂತರ ಕೋರ್ಸು ಮಾಡಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್ ನಿಂದ ಚಿತ್ರಕಲೆ, ಗ್ರಾಫಿಕ್ಸ್ ಕಲೆ, ಶಿಲ್ಪಕಲೆ, ಅನ್ವಯಕಲೆ, ಕಲಾ ಇತಿಹಾಸ ಮತ್ತು ಛಾಯಾಚಿತ್ರ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಜಾಲತಾಣ https://uucms.karnataka.gov.in ಅಥವಾ https:// www.cavamysore.karantaka.gov.in ಮೂಲಕ ಮೇ 30ರೊಳಗಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವೈಯುಕ್ತಿಕ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು.
University of Mysore ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ನ್ನು ಸಂಪರ್ಕಿಸುವಂತೆ ಕಾಲೇಜಿನ ಡೀನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...