Thursday, September 17, 2026
Thursday, September 17, 2026

ಅರಹತೊಳಲು ಗ್ರಾಮದಲ್ಲಿ ನೂತನ ಶ್ರೀವೀರಭದ್ರೇಶ್ವರ ಶಿಲಾದೇಗುಲ ಅದ್ಧೂರಿ ಉದ್ಘಾಟನೆ

Date:

ಭದ್ರಾವತಿ ತಾಲೂಕು, ಹೊಳೆಹೊನ್ನೂರು ಹೋಬಳಿಯ ಅರಹತೊಳಲು ಗ್ರಾಮದಲ್ಲಿ ನೂತನವಾಗಿ ನಿರ್ಮಿತವಾದ ಸುಮಾರು ಒಂದು ಕೋಟಿ ರೂಗೂ ಹೆಚ್ಚು ವೆಚ್ಚದಲ್ಲಿ ಕಲ್ಲಿನ ಕೆತ್ತನೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಉದ್ಘಾಟನೆ ನಡೆದು, ಅಪಾರ ಭಕ್ತರ ಸಮ್ಮುಖದಲ್ಲಿ ಶ್ರೀ ವೀರಭದ್ರಸ್ವಾಮಿಯ ಪುನರ್ ಪ್ರಾಣ ಪ್ರತಿಷ್ಟಾಪನೆ ನೆರವೇರಿತು.

ಕಳೆದ ಒಂದು ವರ್ಷದಿಂದ ಅತ್ಯಂತ ವ್ಯವಸ್ಥಿತ ಹಾಗೂ ವೈಭವೋಪೇತವಾಗಿ ಕಲ್ಲಿನ ದೇವಸ್ಥಾನವನ್ನು ಗ್ರಾಮಸ್ಥರು ನಿರ್ಮಿಸಿದ್ದು, ಇಂದು ಬೆಳಿಗ್ಗೆ ಹೊನ್ನಾಳಿ ಶ್ರೀ ಗಿರಿರಾಜ ಸೂರ್ಯ ಸಿಂಹಾಸನಾ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಎರಡು ದಿನದ ಪೂಜೆ ನಡೆಯಿತು.

ಶ್ರೀ ವೀರಭದ್ರೇಶ್ವರ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ, ಅರ್ಚನೆ ನಡೆಯಿತು.
ಸಾವಿರಾರು ಗ್ರಾಮದ ಗ್ರಾಮಸ್ಥರು ಹಾಗೂ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯವರು ಬಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೊನೆಗೆ ಪ್ರಸಾದ ವಿನಿಯೋಗ ನೆರವೇರಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...