Thursday, June 18, 2026
Thursday, June 18, 2026

ಶಿವಮೊಗ್ಗದ ಪಿಯು ಪರೀಕ್ಷೆ ಟಾಪರ್ಸ್ ಗೆ ಸದ್ಭಾವನಾ ಟ್ರಸ್ಟಿನಿಂದ ಅಭಿನಂದನೆ ಕಾರ್ಯಕ್ರಮ

Date:

ಛಲವಿದ್ದರೆ ಜೀವನದಲ್ಲಿ ಸಾಧನೆ ಸಾಧ್ಯ. ಸಾಧನೆಗೆ ಏನೇನು ಬೇಕೋ ಅದೆಲ್ಲವೂ ನಮ್ಮೊಳಗೇ ಇದೆ. ನಾವು ಪ್ರಯತ್ನ ಪಡಬೇಕು ಎಂದು ಸದ್ಭಾವನ ಟ್ರಸ್ಟ್‌ನ ಅಧ್ಯಕ್ಷರು, ಕಾಂಗ್ರೆಸ್‌ನ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಶ್ರೀಕಾಂತ್ ಹೇಳಿದರು.
ಅವರು ಇಂದು ಬೆಳಗ್ಗೆ ಸದ್ಭಾವನ ಟ್ರಸ್ಟ್‌ನಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಬೃಂದಾ 590(98.33) , ರಂಜಿತಾ ಜಿ. 596(99.33), ವಶಿಷ್ಟ ಎನ್.ಎಸ್. 595 (99.17), ಮಹಿನ್ ಖಾನಂ ಆಫ್ರಿದಿ 596 (99.33) ಹಾಗೂ ಸೋನಿಯಾ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಿ ಮಾತನಾಡಿದರು.
ಸಾಧನೆ ಮಾಡಿದವರನ್ನು ಗುರುತಿಸಿ ಶುಭಹಾರೈಸುವುದರ ಜೊತೆಗೆ ಸನ್ಮಾನಿಸಿ ಪ್ರೇರಣೆ ನೀಡಿದರೆ ಅವರು ಇನ್ನಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಉತ್ತಮವಾಗಿ ಅಧ್ಯಯನ ಮಾಡಿ ಉನ್ನತ ಹುದ್ದೆ ಅಲಂಕರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಯಮುನಾ ರಂಗೇಗೌಡ, ಶಿವಮೊಗ್ಗ ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಬಸವರಾಜ ಹಾಗೂ ಮಂಜುನಾಥ್ ನವುಲೆ, ಜಿಲ್ಲಾ ಅಲೆಮಾರಿ ನಿಗಮದ ಅನುಷ್ಠಾನ ಸಮಿತಿಯ ಸದಸ್ಯ ಸಂದೀಪ್, ಶಿವಕುಮಾರ್, ಅನಿಲ್ ಆಚಾರ್, ಭರತ್, ಅವಿನಾಶ್, ಕುರುವಳ್ಳಿ ನಾಗರಾಜ್ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...