Sunday, August 2, 2026
Sunday, August 2, 2026

S.N. Channabasappa ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನಾ ಸಭೆ‌ .ತುರ್ತು ಕೆಲಸಗಳ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟು ಸೂಚನೆ ನೀಡಿದ ಶಾಸಕ ಚೆನ್ನಿ

Date:

S.N. Channabasappa ಮಹಾನಗರ ಪಾಲಿಕೆಯಲ್ಲಿ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳು ಹೀಗಿವೆ:

ಗುಂಡಿ ಮುಕ್ತ ರಸ್ತೆ: ನಗರಾದ್ಯಂತ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯದ ಪ್ರಗತಿಯನ್ನು ಪರಿಶೀಲಿಸಲಾಯಿತು. ಬಾಕಿ ಇರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕೂಡಲೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ವರದಿ ನೀಡಲು ಸೂಚಿಸಲಾಯಿತು.

ಮಳೆಗಾಲದ ಮುನ್ನೆಚ್ಚರಿಕೆ: ಮುಂಬರುವ ಮಳೆಗಾಲದ ಹಿನ್ನೆಲೆಯಲ್ಲಿ ರಾಜಕಾಲುವೆಗಳ ಹೂಳು ತೆಗೆಯುವುದು ಸೇರಿದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು.

ಅಧಿಕಾರಿಗಳಿಗೆ ಎಚ್ಚರಿಕೆ: ಮಳೆ ಹಾನಿ ಪ್ರದೇಶಗಳ ವೀಕ್ಷಣೆ ಮತ್ತು ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕರ್ತವ್ಯ ಲೋಪವಾದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಪಾರ್ಕಿಂಗ್ ವ್ಯವಸ್ಥೆ ಸುಧಾರಣೆ: ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ವಿವಿಧೆಡೆ ಇರುವ ಕನ್ಸರ್ವೆನ್ಸಿ ರಸ್ತೆಗಳನ್ನು ತುರ್ತಾಗಿ ಅಭಿವೃದ್ಧಿಪಡಿಸಿ, ಅವುಗಳನ್ನು ವ್ಯವಸ್ಥಿತ ವಾಹನ ಪಾರ್ಕಿಂಗ್‌ಗಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಬೀದಿ ದೀಪ ನಿರ್ವಹಣೆ: ಪಾಲಿಕೆಯ ವಿದ್ಯುತ್ ವಿಭಾಗದ ಅಧಿಕಾರಿಗಳು ಪ್ರತಿದಿನ ವಾರ್ಡ್‌ಗಳಲ್ಲಿ ಸಂಚರಿಸಿ ಬೀದಿ ದೀಪಗಳ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸಬೇಕು. ನಿರ್ವಹಣೆಯಲ್ಲಿ ವಿಫಲರಾದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಲಾಯಿತು.

ಕೆರೆ ಮತ್ತು ಪಾರ್ಕ್‌ಗಳ ಅಭಿವೃದ್ಧಿ: ಅಮೃತ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಕೆರೆ ಹಾಗೂ ಉದ್ಯಾನವನಗಳ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಯ ವಿವರ ಪಡೆಯಲಾಯಿತು.

S.N. Channabasappa ನಗರೋತ್ಥಾನ ಯೋಜನೆ: NGT ಹಾಗೂ ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಯ ಅಡಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಅಧಿಕಾರಿಗಳಿಗೆ ತಾಕೀತು ಮಾಡಲಾಯಿತು.

ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ರಾಯಣ್ಣ ಗೌಡ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...