Saturday, May 2, 2026
Saturday, May 2, 2026

CM Siddharamaiah ವಿಧಾನಸಭೆ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ :‌ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ

Date:

CM Siddharamaiah ನಾವು ಮೊದಲೇ ಎಚ್ಚರಿಕೆ ಕೊಟ್ಟಂತೆ ವಿಧಾನಸಭಾ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ನರೇಂದ್ರಮೋದಿ ಸರ್ಕಾರವು ಬೆಲೆಯೇರಿಕೆ ಮಾಡತೊಡಗಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಮೇ 1ರಿಂದ ಜಾರಿಗೆ ಬರುವಂತೆ ಏಕಾಏಕಿ ₹993 ಹೆಚ್ಚಳ ಮಾಡಿದೆ. ಒಟ್ಟಾರೆ 19 ಕೆಜಿಯ 1 ಸಿಲಿಂಡರ್‌ಗೆ ನಿನ್ನೆಯವರೆಗೆ ₹2,078.50ರಷ್ಟಿದ್ದ ದರ ಇದೀಗ ₹3,071.5ಗೆ ತಲುಪಿದೆ. ಚುನಾವಣೆ ಅವಧಿಯಲ್ಲಿ ಮೋದಿ ಸರ್ಕಾರವು ಉದ್ದೇಶಪೂರ್ವಕವಾಗಿ ವಾಣಿಜ್ಯ ಬಳಕೆಯ ಗ್ಯಾಸ್‌ ಬೆಲೆ ಏರಿಕೆಯನ್ನು ತಡೆದಿತ್ತು ಎಂಬುದಕ್ಕೆ ದಿಢೀರನೆ ಇಷ್ಟು ಪ್ರಮಾಣದಲ್ಲಿ ಏರಿಕೆ ಮಾಡಿರುವುದು ಸಾಕ್ಷಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕೇವಲ 4 ತಿಂಗಳ ಅವಧಿಯಲ್ಲಿ ಮೋದಿ ಸರ್ಕಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು 6 ಬಾರಿ ಏರಿಕೆ ಮಾಡಿದ್ದು, ಒಟ್ಟು ₹1,518 ಹೊರೆಯನ್ನು ಬಳಕೆದಾರರ ಮೇಲೆ ಹೊರಿಸಿದೆ. ಇದೊಂದು ರೀತಿಯಲ್ಲಿ ಅಧಿಕೃತ ಲೂಟಿಯೇ ಹೊರತು ಆಡಳಿತದ ಕ್ರಮವಲ್ಲ. ಆಗಾಗ ಜಾಗತಿಕ ಪರಿಸ್ಥಿತಿಗಳು ಬದಲಾಗುತ್ತಿರುತ್ತವೆ, ಇಂತಹ ಸಂದರ್ಭದಲ್ಲಿ ಭಾರತದ ನಾಗರಿಕರನ್ನು ಕಾಪಾಡುವುದು ಪ್ರಧಾನಿಯಾಗಿ ಮೋದಿಯವರ ಕರ್ತವ್ಯವಾಗಿದೆ. ಆದರೆ ಜನಸಾಮಾನ್ಯರನ್ನು ರಕ್ಷಿಸುವ ಬದಲು ಅವರ ಮೇಲೆಯೇ ಬೆಲೆ ಏರಿಕೆಯ ಹೊರೆ ಹೊರಿಸುವುದು ಅರ್ಥಹೀನವಾಗಿದೆ. ನಮ್ಮ ದೇಶದ ಆರ್ಥಿಕತೆಗೆ ವಿದೇಶಾಂಗ ನೀತಿಯು ಶ್ರೀರಕ್ಷೆಯಂತಿರಬೇಕು. ಆದರೆ ಮೋದಿ ಸರ್ಕಾರದ ಟೊಳ್ಳು ವಿದೇಶಾಂಗ ನೀತಿಯಿಂದಾಗಿ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ ಹೇಳಿದ್ದಾರೆ.

ವಾಣಿಜ್ಯ ಗ್ಯಾಸ್‌ ದರ ಏರಿಕೆಯಿಂದ ಕೇವಲ ವ್ಯಾಪಾರಸ್ಥರು ಮಾತ್ರ ಸಂಕಷ್ಟಕ್ಕೆ ಒಳಗಾಗುವುದಿಲ್ಲ, ದೇಶದ ಪ್ರತಿಯೊಂದು ಮನೆಯ ಮೇಲೂ ದರ ಏರಿಕೆಯ ಪರಿಣಾಮ ಬೀರುತ್ತದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಸಣ್ಣಪುಟ್ಟ ಕ್ಯಾಂಟೀನ್‌ಗಳು ಹಾಗೂ ಕೆಟರಿಂಗ್‌ ಸೇವೆಗಳಿಗೆ ತಮ್ಮ ಆಹಾರ ಪದಾರ್ಥಗಳ ಮೇಲೆ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗುತ್ತದೆ. ಇದರಿಂದ ಗ್ರಾಹಕರು ದೈನಂದಿನ ಊಟ-ಉಪಹಾರಗಳಿಗೆ ಹೆಚ್ಚು ಹಣಕೊಡುವ ಪರಿಸ್ಥಿತಿ ಬರುತ್ತದೆ. ನಗರದ ಕಾರ್ಮಿಕರು, ದಿನಗೂಲಿ ಕಾರ್ಮಿಕರು ಮತ್ತು ಸಣ್ಣ ಉದ್ಯಮಗಳ ಮಾಲೀಕರು ಹೆಚ್ಚು ಸಂಕಷ್ಟ ಅನುಭವಿಸಬೇಕಾಗುತ್ತದೆ. ಒಂದು ಲೋಟ ಟೀ ಯಿಂದ ಒಂದು ಸರಳ ಊಟದವರೆಗೆ, ಎಲ್ಲವೂ ದುಬಾರಿಯಾಗುತ್ತದೆ ಎಂದು ಹೇಳಿದ್ದಾರೆ.

CM Siddharamaiah ಕಾರ್ಮಿಕರ ದಿನದ ಕೊಡುಗೆ ಎಂಬಂತೆ ಮೋದಿಯವರು ವಾಣಿಜ್ಯ ಬಳಕೆಯ ಸಿಲಿಂಡರ್‌ ದರ ಏರಿಸುವ ಮೂಲಕ ಶ್ರಮಿಕ ವರ್ಗಕ್ಕೆ ಬರೆ ಎಳೆದಿದ್ದಾರೆ. ಒಂದೆಡೆ ದರಗಳು ದುಬಾರಿಯಾದರೆ, ಮತ್ತೊಂದೆಡೆ ಆದಾಯ ಕ್ಷೀಣಿಸುತ್ತಿದೆ. ದೈನಂದಿನ ಜೀವನ ಮತ್ತಷ್ಟು ದುಸ್ತರವಾಗುತ್ತಿದೆ. ಕಾರ್ಮಿಕರು ಕೇಂದ್ರ ಸರ್ಕಾರದ ಬಳಿ ಘನತೆಯ ಹಾಗೂ ನೆಮ್ಮದಿಯ ಬದುಕನ್ನು ಕಲ್ಪಿಸುವಂತೆ ಕೇಳಿದರೆ ಬೆಲೆಯೇರಿಕೆ ಮತ್ತು ಸಮರ್ಥನೆಯ ಉತ್ತರವನ್ನು ಕೊಡುತ್ತಿದೆ.

ಇದು ಕೇವಲ ಆರಂಭವಷ್ಟೇ, ಇಂತಹ ಮತ್ತಷ್ಟು ಬೆಲೆ ಏರಿಕೆಯ ಹೊಡೆತಗಳು ಅಪ್ಪಳಿಸಲಿವೆ, ಅದರ ಹೊರೆಯನ್ನು ನಾಗರಿಕರೇ ಹೊತ್ತುಕೊಳ್ಳುವಂತಾಗಲಿದೆ. ಇದು ಮೋದಿ ಮಾದರಿಯ ಆಡಳಿತವಾಗಿದೆ. ಚುನಾವಣೆಯಲ್ಲಿ ಜನರ ದಾರಿ ತಪ್ಪಿಸುವುದು, ಬಳಿಕ ಅವರ ಮೇಲೆ ಹೊರೆ ಹೊರಿಸುವುದು ಮೋದಿಯವರ ಸೂತ್ರವಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Agricultural University ಕೃಷಿ ಪದವಿಗೆ ಪ್ರಾಯೋಗಿಕ ಪರೀಕ್ಷೆಯ ಅವಧಿ ವಿಸ್ತರಣೆ

Agricultural University ರೈತರ ಮಕ್ಕಳಿಗಾಗಿ ಮೀಸಲಿರುವ ಕೃಷಿ ಪದವಿ ಸೀಟುಗಳಿಗಾಗಿ ಪ್ರವೇಶ...

B.Y. Raghavendra ಸಹಕಾರ ಕ್ಷೇತ್ರವು ದೇಶದ ಬೆನ್ನೆಲುಬು- ಬಿ.ವೈ.ರಾಘವೇಂದ್ರ

B.Y. Raghavendra ಬಿನಾ ಸಂಸ್ಕಾರ್ ನಹೀ ಸಹಕಾರ್ - ಬಿನಾ ಸಹಕಾರ್...

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ...