Wednesday, August 12, 2026
Wednesday, August 12, 2026

Mangalore CID Police ಚಿಪ್ಪು ಹಂದಿಯ ಚಿಪ್ಪು ಪತ್ತೆ; ಕಾರು ಸಮೇತ ಮೂವರ ಬಂಧನ

Date:

Mangalore CID Police ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ದೊರೆತ ಮಾಹಿತಿಯಂತೆ ಮೇ 05 ರಂದು ಮಂಗಳೂರು ಕದ್ರಿ ಉದ್ಯಾನವನದ ಬಳಿಯಲ್ಲಿ ಮಾರುತಿ ಸ್ವಿಪ್ಟ್ ಕಾರಿನಲ್ಲಿ ಮೂರು ಜನ ಚಿಪ್ಪು ಹಂದಿಯ ಚಿಪ್ಪುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ದಾಳಿ ಮಾಡಿ ಬಂಧಿಸಿದ್ದಾರೆ.
ಬೆಂಗಳೂರು ದಕ್ಷಿಣದ ಹೆಚ್.ಆರ್. ಜಗದೀಶ, ಕನಕಪುರದ ಸಿದ್ದುನಾಯ್ಕ ಹಾಗೂ ಬೆಂಗಳೂರು ಬನಶಂಕರಿ 2ನೇ ಹಂತದ ಬಾಬು ಟಿಪ್ಪು ಸಾಬ್ ಇವರುಗಳು ಮಾರಾಟ ಮಾಡಲು ಕಾರಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 5.200 ಕಿ. ಗ್ರಾಂ ಚಿಪ್ಪು ಹಂದಿಯ ಚಿಪ್ಪುಗಳನ್ನು ಮತ್ತು ಸ್ವಿಫ್ಟ್ ಕಾರ್‌ನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತಾರೆ.
ಬೆಂಗಳೂರು ಸಿ.ಐ.ಡಿ. ಅರಣ್ಯ ಘಟಕದ ಪೊಲೀಸ್ ಮಹಾನಿರೀಕ್ಷಕರು, ಮಡಿಕೇರಿ ಸಿ.ಐ.ಡಿ. ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಇವರುಗಳ ಮಾರ್ಗದರ್ಶನಲ್ಲಿ ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್. ಮತ್ತು ಸಿಬ್ಬಂದಿಗಳಾದ ತಾರನಾಥ ಎಸ್. ಹಾಗೂ ಅಬ್ದುಲ್ ರವೂಫ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಅರಣ್ಯ ಕಾಯ್ದೆ ಮತ್ತು ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಗೆ ಸಂಬಂಧಪಟ್ಟ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಮಡಿಕೇರಿ ಸಿಐಡಿ ಅರಣ್ಯ ಘಟಕ ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂ.: 9480800220 ಹಾಗೂ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಕಚೇರಿ ದೂ.ಸಂ.: 9480803394ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಸಾಗರ ಸಿ.ಐ.ಡಿ. ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...