Tuesday, September 29, 2026
Tuesday, September 29, 2026

ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಲ್ಲಿ ಕುರಿ ಸಾಕಣೆ ಬಗ್ಗೆ ಉಚಿತ ತರಬೇತಿ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ 18 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಕುರಿ ಸಾಕಾಣಿಕೆ ಕುರಿತು ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಶಿಬಿರದಲ್ಲಿ ಕುರಿ ಸಾಕಾಣಿಕೆ ಜೊತೆಗೆ ವೈಜ್ಙಾನಿಕ ರೀತಿಯಲ್ಲಿ ಹಸು ಸಾಕಾಣಿಕೆ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ತೋಟಗಾರಿಕಾ ಬೆಳೆಗಳು, ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ 18 ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು.
ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 18/05/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050/ 9591514154/ 9686248369/6363139123/ 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...