Saturday, May 16, 2026
Saturday, May 16, 2026

ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಸುತ್ತಲ ಪ್ರದೇಶದ ಹೂವಿನ ಮಾರುಕಟ್ಟೆ ತೆರವು ,ಕ್ಷಿಪ್ರ ಕಾರ್ಯಾಚರಣೆ

Date:

ಶಿವಮೊಗ್ಗ ನಗರದಲ್ಲಿ ಫುಟ್‌ಪಾತ್‌ ಮತ್ತು ರಸ್ತೆಗಳ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಶಿವಪ್ಪನಾಯಕ ಪ್ರತಿಮೆ ಬಳಿ ಇದ್ದ ಹೂವಿನ ಮಾರುಕಟ್ಟೆಯನ್ನು ಇಂದು ಬೆಳಗ್ಗೆ ತೆರವುಗೊಳಿಸಲಾಗಿದೆ.
ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಂಚಾರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಮಳಿಗೆಗಳ ತೆರವುಗೊಳಿಸಲಾಯಿತು. ಶಿವಪ್ಪನಾಯಕ ಪ್ರತಿಮೆ ಎದುರಿನ ರಸ್ತೆಯಲ್ಲಿ ಎನ್‌ಡಿವಿ ಹಾಸ್ಟೆಲ್‌ವರೆಗೆ ಇದ್ದ ಮಳಿಗೆಗಳನ್ನು ತೆರವು ಮಾಡಲಾಯಿತು.
ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡಲಾಗುತ್ತಿತ್ತು. ಇದರಿಂದಾಗಿ ಈ ಭಾಗದ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟವಾಗಿತ್ತು ಮತ್ತು ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗಿತ್ತು. ಹಾಗಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ಅನಧಿಕೃತ ಮಳಿಗೆಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.
ಇನ್ನು, ಈ ಹಿಂದೆ ಸಂಚಾರ ಠಾಣೆ ಪೊಲೀಸರು ಈ ಮಳಿಗೆಗಳು ರಸ್ತೆಯ ಹೊರಗೆ ಇರಬೇಕೆಂದು ಸೂಚಿಸಿದ್ದರು. ರಸ್ತೆಯ ಎರಡು ಬದಿಗಿದ್ದ ಬಿಳಿ ಪಟ್ಟಿಯ ಹೊರಗೆ ಮಳಿಗೆಗಳನ್ನು ಇರಿಸುವಂತೆ ಗಡುವು ನೀಡಿದ್ದರು. ಆದರೆ ದಿನ ಕಳೆದಂತೆ ಪುನಃ ಮಳಿಗೆಗಳು ರಸ್ತೆಯನ್ನೇ ಆಕ್ರಮಿಸಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮತ್ತು ಸಂಚಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಳಿಗೆಗಳನ್ನು ತೆರವುಗೊಳಿಸಿದ್ದಾರೆ. ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ದೇವರಾಜ್ ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...