Wednesday, September 9, 2026
Wednesday, September 9, 2026

Rotary Shimoga ಆರೋಗ್ಯ ಕಾಳಜಿವಹಿಸುವವರು ಅನೇಕ ಮೊಬೈಲ್ ಆ್ಯಪ್ ಬಳಸಿ ತಮ್ಮ ದೇಹಾರೋಗ್ಯ ಅರಿಯಬಹುದು- ಡಾ.ಬಾಲು

Date:

Rotary Shimoga ಒತ್ತಡದ ಜೀವನಶೈಲಿಯಿಂದ ಬಹುತೇಕ ಜನರು ಬಳಲುತ್ತಿದ್ದು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಗಮನ ಹರಿಸಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ. ಬಾಲು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಮಾತನಾಡಿ, ಆಧುನಿಕ ತಂತ್ರಜ್ಞಾನ ಯುಗದಲ್ಲಿ ಮನೆಯಲ್ಲೇ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಮೊಬೈಲ್ ಮುಖಾಂತರ ಎಐ ಬಳಸಿ ರಕ್ತದ ಒತ್ತಡ ಪರೀಕ್ಷೆ ಮಾಡಬಹುದು. ವೈದ್ಯರನ್ನು ಸಂಪರ್ಕಿಸಿ ಅಗತ್ಯ ಮಾರ್ಗದರ್ಶನ ಪಡೆಯಹುದಾಗಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಅನೇಕ ಮೊಬೈಲ್ ಅಪ್ಲಿಕೇಷನ್‌ಗಳನ್ನು ಬಳಸಬಹುದಾಗಿದೆ ಎಂದು ತಿಳಿಸಿದರು.

ಡಾ. ಗುಡದಪ್ಪ ಕಸಬಿ ಮಾತನಾಡಿ, ವಿದೇಶಗಳಲ್ಲಿ ಜನರು ಮುಂಜಾಗೃತಾ ಕ್ರಮವಾಗಿ ರಕ್ತದೊತ್ತಡ ಪರೀಕ್ಷೆ ಮಾಡಿಸಿಕೊಳ್ಳುತ್ತಾರೆ. ಆದರೆ ಭಾರತದಲ್ಲಿ ಶೇ. 17ರಷ್ಟು ಜನರು ಮಾತ್ರ ರಕ್ತದೊತ್ತಡ ಪರೀಕ್ಷೆ ಮಾಡಿಸುತ್ತಾರೆ ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಮಾತನಾಡಿ, ಎಲ್ಲ ವಯಸ್ಸಿನವರು ಒತ್ತಡದ ಜೀವನಶೈಲಿ ಸಮಸ್ಯೆ ಎದುರಿಸುತ್ತಿದ್ದಾರೆ. ಸಕಾಲಕ್ಕೆ ವೈದ್ಯರ ಮಾರ್ಗದರ್ಶನ ಪಡೆಯುವುದು ಅತ್ಯಂತ ಮುಖ್ಯ ಆಗಿರುತ್ತದೆ. ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಎಲ್ಲರೂ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ ಮಾತನಾಡಿ, ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ಮೊಬೈಲ್ ಬಳಸುತ್ತಾರೆ. ಎಐ ಬಳಸುವ ಮೂಲಕ ಅನೇಕ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಆರೋಗ್ಯದ ಬಗ್ಗೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದರು.

Rotary Shimoga ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ನಿಯೋಜಿತ ಸೇನಾನಿ ಎ.ಒ.ಮಹೇಶ್, ನಿಯೋಜಿತ ಅಧ್ಯಕ್ಷ ಡಿ.ಕೆ.ಶೇಷಗಿರಿ, ಶ್ರೀಕಾಂತ್, ಆದಿಮೂರ್ತಿ, ಶ್ರೀನಿವಾಸಗೌಡ, ಎಸ್.ಗಣೇಶ್, ಚಂದ್ರಹಾಯ ಪಿ.ರಾಯ್ಕರ್, ಬಿ.ಗಂಗಪ್ಪ, ಡಾ. ಪರಮೇಶ್ವರ್ ಶಿಗ್ಗಾವ್, ಆರ್.ಕೃಷ್ಣಮೂರ್ತಿ, ವೀಣಾ ಕಿಶೋರ್, ಗಿರಿಜಾ ಧನಂಜಯ್, ಬಿಂದು ವಿಜಯಕುಮಾರ್, ಅರುಣ್ ದೀಕ್ಷಿತ್, ಡಾ. ರಕ್ಷಿತ್, ಡಾ. ಶಿವು ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...