Thursday, August 6, 2026
Thursday, August 6, 2026

ಮೇ 18 ರಿಂದ 23 ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ” ಜನ ಭಾಗಿದಾರಿ …” ವಿಶೇಷ ಮಾಹಿತಿ ಅಭಿಯಾನ

Date:

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವತಿಯಿಂದ ಜಿಲ್ಲೆಯಲ್ಲಿ ಮೇ 18 ರಿಂದ ಮೇ 25 ರವರೆಗೆ “ಜನ ಭಾಗೀದಾರಿ – ಸಬ್‌ಸೇ ದೂರ್, ಸಬ್‌ಸೇ ಪೆಹ್ಲೆ” ಎಂಬ ವಿಶೇಷ ಮಾಹಿತಿ ಶಿಕ್ಷ ಸಂವಹನ(ಐಇಸಿ) ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವುದು ಮತ್ತು ಅದಕ್ಕೆ ಬೇಕಾಗುವ ಅಗತ್ಯ ದಾಖಲಾತಿಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ 17 ಇಲಾಖೆಗಳ ಸಮನ್ವಯದೊಂದಿಗೆ ಈ ಅಭಿಯಾನವನ್ನು ಆಯೋಜಿಸಲಾಗಿದೆ.
ಗ್ರಾಮಗಳಲ್ಲಿ ಜಾಗೃತಿ ಮತ್ತು ಆರೋಗ್ಯ ಶಿಬಿರ:
‘ಧರ್ತಿ ಆಬಾ ಜನಜಾತೀಯ ಗ್ರಾಮ್ ಉತ್ಕರ್ಷ್ ಅಭಿಯಾನ್’ (ಡಿಎ-ಜೆಜಿಯುಎ)ಯೋಜನೆಯಡಿ ಆಯ್ಕೆಯಾಗಿರುವ ಶಿವಮೊಗ್ಗ ತಾಲೂಕಿನ ಎರಡು ಪ್ರಮುಖ ಗ್ರಾಮಗಳಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ.
ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿರೂಪಿನಕೊಪ್ಪ , ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸದಾಶಿವಪುರ ಈ ಗ್ರಾಮಗಳಲ್ಲಿ ಅಭಿಯಾನದ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರಗಳು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಪಿಎಂ -ಜನ್‌ಮನ್ ಹಾಗೂ ಡಿಎ-ಜೆಜಿಯುಎ ಯೋಜನೆಗಳ ಬಗ್ಗೆ ಸಮುದಾಯದ ಜನರಲ್ಲಿ ವ್ಯಾಪಕ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.
ಶಿವಮೊಗ್ಗ ತಾಲೂಕಿನ ವಿರೂಪಿನಕೊಪ್ಪ ಮತ್ತು ಸದಾಶಿವಪುರ ಗ್ರಾಮಗಳ ಪರಿಶಿಷ್ಟ ಪಂಗಡ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರಗಳಲ್ಲಿ ಪಾಲ್ಗೊಂಡು ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕಾಗಿ ಅವರು ಪ್ರಕಟಣೆಯಲ್ಲಿ‌ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...