Monday, September 28, 2026
Monday, September 28, 2026

S.N. Channabasappa ಸ್ಥಳೀಯ ನಾಗರಿಕರನ್ನ ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ನಡೆಸಿ- ಎಸ್.ಎನ್‌. ಚನ್ನಬಸಪ್ಪ

Date:

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 6ರ ವ್ಯಾಪ್ತಿಯ ಗಾಡಿಕೊಪ್ಪದ ಪೊಲೀಸ್ ಲೇಔಟ್‌ನಲ್ಲಿ ಮಹಾನಗರ ಪಾಲಿಕೆಯಿಂದ ಕೈಗೆತ್ತಿಕೊಳ್ಳಲಾಗಿರುವ ಯುಜಿಡಿ ವೆಟ್‌ವೆಲ್ ಕಾಮಗಾರಿ ಸ್ಥಳಕ್ಕೆ ಮಾನ್ಯ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಭೇಟಿ ನೀಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಸಭೆ ನಡೆಸಿದರು.

ಸದರಿ ಪೊಲೀಸ್ ಲೇಔಟ್‌ನಲ್ಲಿ ಪಾಲಿಕೆ ವತಿಯಿಂದ ನಡೆಯುತ್ತಿದ್ದ ಯುಜಿಡಿ ಕಾಮಗಾರಿಗೆ ತಾಂತ್ರಿಕ ಹಾಗೂ ಸ್ಥಳೀಯ ಕಾರಣಗಳಿಂದ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸ್ಪಂದಿಸಿದ ಶಾಸಕರು, ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

S.N. Channabasappa ಸಾರ್ವಜನಿಕರು ಮತ್ತು ಪಾಲಿಕೆಯ ಇಂಜಿನಿಯರ್‌ಗಳೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, “ನಗರದ ಹಾಗೂ ವಾರ್ಡ್‌ನ ಸರ್ವಾಂಗೀಣ ಅಭಿವೃದ್ಧಿ ನಮಗೆ ಮುಖ್ಯ. ಆದರೆ, ಯಾವುದೇ ಕಾಮಗಾರಿಯಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಬಾರದು. ಸ್ಥಳೀಯ ನಾಗರಿಕರ ಆತಂಕಗಳನ್ನು ದೂರ ಮಾಡಿ, ಅವರನ್ನು ಸಂಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆಯಿಂದ ಸ್ಥಳ ಪರಿಶೀಲಿಸಿ ಕಾಮಗಾರಿಯನ್ನು ತಕ್ಷಣವೇ ಪುನರಾರಂಭಿಸಬೇಕು” ಎಂದು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಶಾಸಕರ ಮಧ್ಯಸ್ಥಿಕೆಯಿಂದಾಗಿ ಸ್ಥಳೀಯರ ಗೊಂದಲಗಳು ಬಗೆಹರಿದಿದ್ದು, ಕಾಮಗಾರಿ ನಡೆಸಲು ಸಾರ್ವಜನಿಕರು ಸಮ್ಮತಿ ಸೂಚಿಸಿದರು.

ಈ ಸ್ಥಳ ಪರಿಶೀಲನಾ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳು, ವಾರ್ಡ್‌ನ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...