Wednesday, September 9, 2026
Wednesday, September 9, 2026

DC Shivamogga ಮೇ ಮತ್ತು ಜೂನ್ ತಿಂಗಳ ಪಡಿತರ ಅಕ್ಕಿ ವಿತರಣೆ ಮಾಹಿತಿ

Date:

DC Shivamogga ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2026ರ ಮೇ ಮತ್ತು ಜೂನ್ ಮಾಹೆಗಳ ಆಹಾರ ಧಾನ್ಯಗಳನ್ನು ಮೇ 2026ರ ಮಾಹೆಯಲ್ಲಿಯೇ ವಿತರಣೆ ಮಾಡಲು ಸರ್ಕಾರವು ಆದೇಶಿಸಿದೆ.
ಅಂತ್ಯೋದಯ ಅನ್ನ ಯೋಜನೆಯಡಿ ಪಡಿತರ ಚೀಟಿಗೆ 35 ಕೆ.ಜಿ.ಯಂತೆ ಎರಡು ತಿಂಗಳ ಅಕ್ಕಿ 70 ಕೆ.ಜಿ. ಹಾಗೂ ಆದ್ಯತಾ ಕೇಂದ್ರ ಮತ್ತು ರಾಜ್ಯ ಪಡಿತರ ಚೀಟಿಗೆ ಪ್ರತಿ ಸದಸ್ಯರಿಗೆ ಕೇಂದ್ರದಿಂದ ತಲಾ 5 ಕೆ.ಜಿ. ಯಂತೆ ಎರಡು ತಿಂಗಳ ಅಕ್ಕಿ 10 ಕೆ.ಜಿ.ಯಂತೆ ಮೇ-31 ರೊಳಗೆ ಮಾತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. DC Shivamogga ಪಡಿತರ ಚೀಟಿದಾರರು ಆಹಾರ ಧಾನ್ಯವನ್ನು ಪಡೆಯುವಾಗ ಮೇ ಮತ್ತು ಜೂನ್ ರ ಮಾಹೆಯ ಹಂಚಿಕೆಗಳಿಗೆ ಪ್ರತ್ಯೇಕವಾಗಿ ಎರಡು ಬಾರಿ ಕಡ್ಡಾಯವಾಗಿ ಬಯೋ ನೀಡಿ ಪ್ರತಿ ದಿನ ಬೆಳಗ್ಗೆ 6.00 ರಿಂದ ರಾತ್ರಿ 10.00ರವರೆಗೆ ಪಡಿತರ ವಿತರಣೆಗೆ ಸರ್ವರ್ ಲಭ್ಯಗೊಳಿಸಿರುವುದರಿಂದ ಮೇ 31 ರೊಳಗಾಗಿ ಪಡಿತರ ಪಡೆಯುವುದು. ಪಡಿತರ ವಿತರಣೆ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಕೇಂದ್ರ ಸಹಾಯವಾಣಿ 1967 ಕ್ಕೆ ಕರೆ ಮಾಡಿ ಅಥವಾ ಹತ್ತಿರದ ಆಹಾರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...