Sunday, October 25, 2026
Sunday, October 25, 2026

ಆನ್ ಲೈನ್ ಮೆಡಿಸಿನ್ ಮತ್ತು ಯದ್ವಾತದ್ವ ರಿಯಾಯಿತಿ ಔಷಧ ಪೂರೈಕೆ ವಿರುದ್ಧ ಔಷಧ ವ್ಯಾಪಾರಿಗಳ ಪ್ರತಿಭಟನೆ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮೆಡಿಕಲ್ ಶಾಪ್‌ಗಳು ಸಂಪೂರ್ಣ ಬಂದ್ ಆಗಿದ್ದು, ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಪ್ರತಿಭಟನೆ ನಡೆಸಲಾಗಿದೆ. ಡಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಆನ್‌ಲೈನ್ ಮೆಡಿಸಿನ್ ಮಾರಾಟ, ಬೇಕಾಬಿಟ್ಟಿ ರಿಯಾಯಿತಿ ಹಾಗೂ ನಕಲಿ ಔಷಧ ಪೂರೈಕೆ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ.

ಆನ್‌ಲೈನ್ ಮೂಲಕ ಔಷಧ ಮಾರಾಟ ಹೆಚ್ಚುತ್ತಿರುವುದು, ಅತಿಯಾದ ರಿಯಾಯಿತಿಯಲ್ಲಿ ಔಷಧ ವಿತರಣೆ ನಡೆಯುತ್ತಿರುವುದು ಹಾಗೂ ನಕಲಿ ಔಷಧ ಪೂರೈಕೆ ಹೆಚ್ಚುತ್ತಿರುವುದರಿಂದ ಸಾಂಪ್ರದಾಯಿಕ ಔಷಧ ವ್ಯಾಪಾರಿಗಳಿಗೆ ಭಾರೀ ನಷ್ಟ ಉಂಟಾಗುತ್ತಿದೆ ಎಂದು ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ಆನ್‌ಲೈನ್ ಮೆಡಿಸಿನ್ ಮಾರಾಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು, ನಕಲಿ ಔಷಧ ಪೂರೈಕೆ ತಡೆಯಬೇಕು ಹಾಗೂ ಔಷಧ ವ್ಯಾಪಾರಿಗಳ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L.B. College Sagara ಸಾಗರದ ಎಲ್ ಬಿ ಕಾಲೇಜಿನಲ್ಲಿ ರಕ್ತದಾನ ಮತ್ತು ನೇತ್ರ,ಆರೋಗ್ಯ ತಪಾಸಣ ಶಿಬಿರ

L.B. College Sagara ಸಾಗರದ ಎಲ್.ಬಿ. ಕಾಲೇಜಿನಲ್ಲಿ ರಕ್ತದಾನ, ನೇತ್ರ ತಪಾಸಣೆ...

S. N. Channabasappa ಕಿತ್ತೂರು ರಾಣಿ ಚೆನ್ನಮ್ಮನ ಸ್ವಾಭಿಮಾನ,ಶೌರ್ಯಗಳು ನಿತ್ಯ ಪ್ರೇರಣದಾಯಕ- ಶಾಸಕ ಚನ್ನಬಸಪ್ಪ

S. N. Channabasappa "ಮಾತೃಭೂಮಿಯ ರಕ್ಷಣೆಗಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಕೆಚ್ಚೆದೆಯಿಂದ...

B.Y. Raghavendra ಭಕ್ತಿ,ಜ್ಞಾನ ಮತ್ತು ಧರ್ಮನಿಷ್ಠೆಗಳಿಗೆ ಶ್ರೀಮಧ್ವಾಚಾರ್ಯರು ಒತ್ತು ನೀಡಿದ್ದರು- ಬಿ.ವೈ.ರಾಘವೇಂದ್ರ

ಜಗದ್ಗುರು ಶ್ರೀ ಮಧ್ವಾಚಾರ್ಯರು ಭಕ್ತಿ, ಜ್ಞಾನ ಮತ್ತು ಧರ್ಮನಿಷ್ಠೆಗೆ ವಿಶೇಷ ಮಹತ್ವ...

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...